ಪಿಒಪಿ ಗಣೇಶ ಮೂರ್ತಿ ತಯಾರಿಸುವ ಮೊದಲೇ ನಿಷೇಧ ಜಾರಿ: ಕಟ್ಟುನಿಟ್ಟಿನ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ನಿಂದ(ಪಿಒಪಿ) ಗಣಪ ಮತ್ತು ಗೌರಿಯ ಮೂರ್ತಿಗಳ ತಯಾರಿಕೆ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಈಗಿನಿಂದಲೇ ಕ್ರಮ ತೆಗೆದುಕೊಳ್ಳುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಪರಿಸರ ಸಚಿವ ಈಶ್ವರ್‌ ಖಂಡ್ರೆ ಅವರು ತಿಳಿಸಿದ್ದಾರೆ.

ಪಿಒಪಿ ಮೂರ್ತಿಗಳಲ್ಲಿ ಗಂಧಕ, ರಂಜಕ, ಜಿಪ್ಸಂ ಮತ್ತು ಮೆಗ್ನೀಷಿಯಂ ನಂತಹ ಅನೇಕ ಅಪಾಯಕಾರಿ ರಾಸಾಯನಿಕಗಳಿದ್ದು, ಇವುಗಳಿಗೆ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇವುಗಳನ್ನು ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದರಿಂದ ನೀರು ಮಲಿನವಾಗುತ್ತದೆ ಎಂದು ಹೇಳಿದ್ದಾರೆ.

ಪಿಒಪಿ ಗಣಪತಿ ಮತ್ತು ಗೌರಿ ಮೂರ್ತಿಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ಬಳಕೆಯನ್ನು 2023 ರಲ್ಲಿ ನಿಷೇಧಿಸಲಾಗಿದೆ. ಈ ವರ್ಷದ ಹಬ್ಬಕ್ಕೆ ಪಿಒಪಿ ಮೂರ್ತಿಗಳ ತಯಾರಿಕೆಗೆ ಈಗಿಂದಲೇ ಕಡಿವಾಣ ಹಾಕಬೇಕು. ಜನರಲ್ಲಿ ಮತ್ತು ಮೂರ್ತಿ ತಯಾರಕರಲ್ಲಿ ಜಾಗೃತಿ ಮೂಡಿಸಬೇಕು. ಪಿಒಪಿ ಗಣಪತಿ ಮೂರ್ತಿಗಳ ಬದಲು ಪರಿಸರಸ್ನೇಹಿ ಗಣಪತಿ ಮೂರ್ತಿಗಳನ್ನು ಮಾತ್ರ ಪೂಜಿಸುವಂತೆ ಸಂಘ, ಸಂಸ್ಥೆಯವರಿಗೆ ಮನವಿ ಮಾಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read