HomeLatest Newsವರ್ತಕರಿಗೆ ಹಾಗೂ ಬಳಕೆದಾರರಿಗೆ ಎಲ್ಲಾ ರೀತಿಯ ಏಕಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳ ನಿಷೇಧ: ಉಲ್ಲಂಘಿಸಿದಲ್ಲಿ 10 ಸಾವಿರ...

ವರ್ತಕರಿಗೆ ಹಾಗೂ ಬಳಕೆದಾರರಿಗೆ ಎಲ್ಲಾ ರೀತಿಯ ಏಕಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳ ನಿಷೇಧ: ಉಲ್ಲಂಘಿಸಿದಲ್ಲಿ 10 ಸಾವಿರ ರೂ.ವರೆಗೆ ದಂಡ

ಹಾಸನ ಮಹಾನಗರ ವ್ಯಾಪ್ತಿಯ ವರ್ತಕರಿಗೆ ಹಾಗೂ ಬಳಕೆದಾರರು ಪ್ಲಾಸ್ಟಿಕ್ ತ್ಯಾಜ್ಯವಸ್ತುಗಳ(ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮ-2016ರನ್ವಯ ಘನತ್ಯಾಜ್ಯ ನಿರ್ವಹಣಾ ಉಪನಿಯಮಗಳು-2019ನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಹಾಗೂ ಅಳವಡಿಸಿಕೊಳ್ಳಲಾಗಿದೆ.

ಇದರ ಅನ್ವಯ ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಏಕಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಬಳಕೆ ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ನಿಯಮಗಳ ಅನ್ವಯ ದಂಡ ವಿಧಿಸಲಾಗುವುದು.

ಮಹಾನಗರ ಪಾಲಿಕೆಯಿಂದ ಪ್ಲಾಸ್ಟಿಕ್ ಬಳಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ಕಂಡುಬಂದಲ್ಲಿ ರೂ. 1000 ದಿಂದ 10,000 ರೂ.ವರೆಗೂ ದಂಡ ವಿಧಿಸಲಾಗುವುದಲ್ಲದೇ ಕಾನೂನು ಕ್ರಮ ಜರುಗಿಸಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ತ್ಯಜಿಸಿ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಹಕರಿಸುವಂತೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular