ಸರ್ಕಾರಿ ಆಸ್ಪತ್ರೆಗಳ 200 ಮೀಟರ್ ಒಳಗಿನ ‘ಖಾಸಗಿ ಲಾಬ್’ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ವ್ಯಾಪ್ತಿಯ ಖಾಸಗಿ ಲಾಬ್ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಯಾವುದೇ ಸರ್ಕಾರಿ ಅಥವಾ ಸರ್ಕಾರಿ ನಿರ್ವಹಣೆಯಲ್ಲಿರುವ ಆಸ್ಪತ್ರೆಗಳಿಂದ 200 ಮೀಟರ್‌ಒಳಗಡೆ ಹೊಸದಾಗಿ ಕಾರನಿರ್ವಹಿಸುತ್ತಿರುವ ಅನಧಿಕೃತ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಮುಚ್ಚಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಆಸ್ಪತ್ರೆ, ರಾಜ್ಯ, ಕೇಂದ್ರ ಅಥವಾ ಸ್ಥಳೀಯ ಸಂಸ್ಥೆಗಳ ಒಡೆತನದಲ್ಲಿರುವ ಯಾವುದೇ ಆಸತ್ರೆಯಿಂದ 200 ಮೀ.ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿ ನೀಡುವಂತಿಲ್ಲ ಎಂದು 2019ರ ಏಪ್ರಿಲ್‌ನಲ್‌ನಲ್ಲಿ ಕೆಪಿಎಂಇ ಕಾಯ್ದೆಯಡಿ ಆದೇಶ ಹೊರಡಿಸಿದೆ. ಎಲ್ಲಾ ಜಿಲ್ಲಾ ಆರೋಗ್ಯಾ ಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ 200 ಮೀ. ಒಳಗೆ ಕಾರನಿರ್ವಹಿಸುತ್ತಿರುವ ಎಲ್ಲಾ ಖಾಸಗಿ ಚಿಕಿತ್ಸಾ ಪ್ರಯೋಗಾಲಯ ಸ್ಥಳ ಪರಿಶೀಲಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read