HomeLatest NewsBREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೊರೆ...

BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೊರೆ ಹೋದ ನಿರ್ಮಾಪಕರು

ಬೆಂಗಳೂರು : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ನಿರ್ಬಂಧ ಹೇರಲು ಮುಂದಾಗಿರುವ ವಾಣಿಜ್ಯ ಮಂಡಳಿ ಕ್ರಮ ಪ್ರಶ್ನಿಸಿ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕಮಲ್ ಹಾಸನ್ ಒಡೆತನದರಾಜ್ ಕಮಲ್ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದೆ.ಕಮಲ್ ಹಾಸನ್ ಹೇಳಿಕೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ನಿರ್ಬಂಧ ಹೇರುವುದು ಖಂಡನೀಯ. ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕೆಂದು ಚಿತ್ರದ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕಮಲ್ ಹಾಸನ್ ನಟನೆಯ ಹೊಸ ಸಿನಿಮಾ ಥಗ್ ಲೈಫ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ನಿಷೇಧ ಹೇರಲು ಕನ್ನಡ ಚಿತ್ರರಂಗ ಮತ್ತು ಕನ್ನಡಪರ ಸಂಘಟನೆಗಳು ನಿರ್ಣಯ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ, ನಟ ಕಮಲ್ ಹಾಸನ್ ಅವರು ತಮ್ಮ ಸಂಸ್ಥೆ ರಾಜ್ ಕಮಲ್ ಫಿಲ್ಡ್ ಇಂಟರ್ನ್ಯಾಷನಲ್ ಸಿಇಒ ಮೂಲಕ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕೆಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿದೆ. ಕ್ಷಮೆ ಕೇಳಲು ಫಿಲ್ಮ್ ಚೇಂಬರ್ ನಟ ಕಮಲ್ ಹಾಸನ್ ಗೆ 24 ಗಂಟೆ ಗಡುವು ನೀಡಿದೆ ಎಂಬ ಮಾಹಿತಿ ಲಭ್ಯ ವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular