BREAKING : ಬೆಂಗಳೂರಲ್ಲಿ ಮತದಾನ, ಎಣಿಕೆ ದಿನದಂದು ಮಾತ್ರ ‘ಮದ್ಯ’ ಮಾರಾಟ ನಿಷೇಧ : ಹೈಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರಲ್ಲಿ   ಮದ್ಯ ಮಾರಾಟ ನಿರ್ಬಂಧದಲ್ಲಿ ಮಾರ್ಪಾಡು ಮಾಡಲಾಗಿದ್ದು, ಮತದಾನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ವಿಧಾನಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ ವಿಚಾರವಾಗಿ ಜಿಲ್ಲಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೋಟೆಲ್ಗಳ ಸಂಘಟನೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್  ಫೆ.16 ರ ಬೆಳಗ್ಗೆ 6 ರಿಂದ ಮಧ್ಯರಾತ್ರಿವರೆಗೆ ಹಾಗೂ ಫೆ.20 ರ ಬೆಳಗ್ಗೆ 6 ರಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.  ಆಹಾರ ಪೂರೈಸಲು ರೆಸ್ಟೋರೆಂಟ್ ಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಫೆ.14 ರಿಂದ ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ ಹೊರಡಿಸಿದ್ದರು. ಮದ್ಯ ಮಾರಾಟ ನಿರ್ಬಂಧ ವಿಚಾರವಾಗಿ ಜಿಲ್ಲಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೋಟೆಲ್ಗಳ ಸಂಘಟನೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮತದಾನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read