HomeKarnatakaದೇವಾಲಯಗಳ ಸುತ್ತಾಮುತ್ತಾ ‘ತಂಬಾಕು ಉತ್ಪನ್ನ’ಗಳ ಮಾರಾಟ ನಿಷೇಧ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ದೇವಾಲಯಗಳ ಸುತ್ತಾಮುತ್ತಾ ‘ತಂಬಾಕು ಉತ್ಪನ್ನ’ಗಳ ಮಾರಾಟ ನಿಷೇಧ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು : ಮುಜರಾಯಿ ದೇವಾಲಯಗಳ ಸುತ್ತಮುತ್ತಾ ‘ತಂಬಾಕು ಉತ್ಪನ್ನ’ಗಳ ಮಾರಾಟ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ದೇವಾಲಯಗಳ ಸುತ್ತಮುತ್ತಾ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲು ಸರ್ಕಾರ ನಿರ್ಧರಿಸಿದೆ.

ಶೀಘ್ರದಲ್ಲೇ ಅಧಿಕೃತ ಆದೇಶ

ಹೌದು. ಮುಜರಾಯಿ ದೇವಾಲಯಗಳ ಸುತ್ತಮುತ್ತಾ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಧರ್ಮ‘ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ. ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ನಮ್ಮ ಸರ್ಕಾರ ಎಂದು ಟ್ವೀಟ್ ಮಾಡಿದೆ. ಶೀಘ್ರದಲ್ಲೇ ಈ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular