HomeKarnatakaಆರೋಗ್ಯ ಇಲಾಖೆ ಸಭೆ, ಸಮಾರಂಭಗಳಲ್ಲಿ `ಪ್ಲಾಸ್ಟಿಕ್' ಬಳಕೆ ನಿಷೇಧ : ಮಹತ್ವದ ಆದೇಶ

ಆರೋಗ್ಯ ಇಲಾಖೆ ಸಭೆ, ಸಮಾರಂಭಗಳಲ್ಲಿ `ಪ್ಲಾಸ್ಟಿಕ್’ ಬಳಕೆ ನಿಷೇಧ : ಮಹತ್ವದ ಆದೇಶ

ಬೆಂಗಳೂರು : ಆರೋಗ್ಯ ಇಲಾಕೆಯ ಎಲ್ಲಾ ಆರೋಗ್ಯ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರೋಗ್ಯ ಇಲಾಖೆಯಿಂದ ನಡೆಯುವಂತಹ ಯಾವುದೇ ಸಭೆ, ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯ ನಿಷೇಧಿಸಲಾಗಿತ್ತು. ಆದರೆ ಈ ಆದೇಶವನ್ನು ಸರಿಯಾಗಿ ಪಾಲಿಸದ ಕಾರಣ ಸರ್ಕಾರ ಮತ್ತೊಮ್ಮೆ ಆರೋಗ್ಯಕ್ಕೆ ಇಲಾಖೆ ಖಡಕ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿತ್ತು.

For Latest News Updates, Join Our Whatsapp Community🚩
RELATED ARTICLES

Most Popular