HomeKarnatakaBUDGET BREAKING : 16 ವರ್ಷದೊಳಗಿನ ಮಕ್ಕಳಿಗೆ 'ಸೋಶಿಯಲ್ ಮೀಡಿಯಾ' ಬಳಕೆ ನಿಷೇಧ : CM...

BUDGET BREAKING : 16 ವರ್ಷದೊಳಗಿನ ಮಕ್ಕಳಿಗೆ ‘ಸೋಶಿಯಲ್ ಮೀಡಿಯಾ’ ಬಳಕೆ ನಿಷೇಧ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು :  16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ ಮಾಡುವ ಬಗ್ಗೆ ಬಜೆಟ್ ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.ಈ ಕುರಿತು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಹೌದು. ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.

ಮುಖ್ಯ  ಕಾರಣಗಳು:

  • ಮಾನಸಿಕ ಆರೋಗ್ಯ : ಅತಿಯಾದ ಸ್ಕ್ರೀನ್ ಸಮಯದಿಂದ ಮಕ್ಕಳ ಮಾನಸಿಕ ನೆಮ್ಮದಿ ಮತ್ತು ನಡವಳಿಕೆಯಲ್ಲಿ ಬದಲಾವಣೆಯಾಗುತ್ತಿರುವುದು.
  • ಕಲಿಕಾ ದೌರ್ಬಲ್ಯ: ಸಾಮಾಜಿಕ ಜಾಲತಾಣಗಳ ಗೀಳಿನಿಂದ ವಿದ್ಯಾರ್ಥಿಗಳ ಏಕಾಗ್ರತೆ ಕಡಿಮೆಯಾಗಿ ಓದಿನ ಮೇಲೆ ಪರಿಣಾಮ ಬೀರುತ್ತಿರುವುದು.
  • ಅಪಾಯಕಾರಿ ವಿಷಯಗಳು: ಮಕ್ಕಳು ಸೈಬರ್ ಬೆದರಿಕೆ (Cyberbullying), ಮಾದಕ ದ್ರವ್ಯ ಜಾಲ ಮತ್ತು ಅಶ್ಲೀಲ ವಿಷಯಗಳಿಗೆ ಬಲಿಯಾಗುವುದನ್ನು ತಡೆಯುವುದು.

  ಆಸ್ಟ್ರೇಲಿಯಾ ಮಾದರಿ: ಆಸ್ಟ್ರೇಲಿಯಾ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈಗಾಗಲೇ ಇಂತಹ ಕಠಿಣ ನಿಯಮಗಳು ಜಾರಿಯಲ್ಲಿವೆ ಅಥವಾ ಜಾರಿಗೆ ಬರಲಿವೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಸರ್ಕಾರ ತಜ್ಞರ ಅಭಿಪ್ರಾಯ ಕೇಳಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಹಿನ್ನೆಲೆ, ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಇರಲಿದೆ. ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಮಾಡಲಾಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ವೀಕ್ಷಿಸಬಹುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular