HomeKarnatakaಬಂಡೀಪುರದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶ ಇಲ್ಲ: ಈಶ್ವರ್ ಖಂಡ್ರೆ

ಬಂಡೀಪುರದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶ ಇಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಸಂಪರ್ಕ ಮಾರ್ಗವಾಗಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಸ್ತುತ ರಾತ್ರಿ 9 ಗಂಟೆಯವರೆಗೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅದರ ಹೊರತಾಗಿ ಕರ್ನಾಟಕ ಮತ್ತು ಕೇರಳದ ತಲಾ ಒಂದು ಬಸ್ ಗಳು ರಾತ್ರಿ ವೇಳೆ ಸಂಚರಿಸುತ್ತಿವೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಇದರ ಹೊರತಾಗಿ ಹೊಸದಾಗಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular