HomeKarnatakaBIG NEWS: ಬಂಡೀಪುರ ಅರಣ್ಯದಲ್ಲಿ ಪಲ್ಟಿಯಾದ ಪ್ರವಾಸಿಗರ ಬಸ್

BIG NEWS: ಬಂಡೀಪುರ ಅರಣ್ಯದಲ್ಲಿ ಪಲ್ಟಿಯಾದ ಪ್ರವಾಸಿಗರ ಬಸ್

ಚಾಮರಾಜನಗರ: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ 24 ಪ್ರವಾಸಿಗರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular