HomeLatest Newsತಕ್ಷಣವೇ ಬಂಡೀಪುರ, ನಾಗರಹೊಳೆ ಸಫಾರಿ ಪುನಾರಂಭಿಸಿ; ಅಧಿಕಾರಿಗಳಿಗೆ ಡಿಕೆಶಿ ನಿರ್ದೇಶನ

ತಕ್ಷಣವೇ ಬಂಡೀಪುರ, ನಾಗರಹೊಳೆ ಸಫಾರಿ ಪುನಾರಂಭಿಸಿ; ಅಧಿಕಾರಿಗಳಿಗೆ ಡಿಕೆಶಿ ನಿರ್ದೇಶನ

ಬೆಂಗಳೂರು: ರಾಜ್ಯದ ಪ್ರಮುಖ ರಾಷ್ಟ್ರೀಯ ಉದ್ಯಾನಗಳಾದ ಬಂಡಿಪುರ ಮತ್ತು ನಾಗರಹೊಳೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿನೊಂದಿಗೆ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

​ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವನ್ಯಜೀವಿಗಳ ಸುರಕ್ಷತೆ ಮತ್ತು ಪ್ರವಾಸಿಗರ ಹಿತದೃಷ್ಟಿಯಿಂದ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ತಾಕೀತು ಮಾಡಿದರು.

ಬಂಡಿಪುರ ಮತ್ತು ನಾಗರಹೊಳೆಯಲ್ಲಿ ಹುಲಿ ಹಾಗೂ ಚಿರತೆಗಳ ಸಾಂದ್ರತೆ ಹೆಚ್ಚಿರುವುದರಿಂದ, ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

​ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ತಕರಾರು ಹೂಡಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ, ಯೋಜನೆಯಲ್ಲಿನ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣದ ವೇಳೆ ವನ್ಯಜೀವಿಗಳ ಸುರಕ್ಷಿತ ಸಂಚಾರಕ್ಕಾಗಿ ಅಂಡರ್‌ಪಾಸ್‌ ಹಾಗೂ ಓವರ್‌ಪಾಸ್‌ ನಿರ್ಮಿಸುವ ಷರತ್ತುಗಳನ್ನು ಪಾಲಿಸದಿರುವುದು ಆನೆ, ಹುಲಿ ಹಾಗೂ ಚಿರತೆಗಳ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಚನ್ನಪಟ್ಟಣ ಮತ್ತು ರಾಮನಗರ ಭಾಗದಲ್ಲಿ ವನ್ಯಜೀವಿಗಳು ಅರಣ್ಯದಿಂದ ಹೊರಬರುತ್ತಿರುವುದಕ್ಕೆ ಇದೇ ಪ್ರಮುಖ ಕಾರಣ ಎಂದು ಅಧಿಕಾರಿಗಳು ವಿವರಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮರಗಳು ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಪಾಯಕಾರಿ ಸ್ಥಿತಿಯಲ್ಲಿರುವ ಮರ ಮತ್ತು ಕೊಂಬೆಗಳನ್ನು ತುರ್ತಾಗಿ ಗುರುತಿಸಿ, ತೆರವುಗೊಳಿಸುವ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

​ಈ ಸಭೆಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರು ಮತ್ತು ಹಿರಿಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular