HomeKarnatakaಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಮೋಜು-ಮಸ್ತಿ; ಭರ್ಜರಿ ಎಣ್ಣೆ ಪಾರ್ಟಿ: ಅರಣ್ಯ ಇಲಾಖೆಯಿಂದ ಭದ್ರತಾ...

ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಮೋಜು-ಮಸ್ತಿ; ಭರ್ಜರಿ ಎಣ್ಣೆ ಪಾರ್ಟಿ: ಅರಣ್ಯ ಇಲಾಖೆಯಿಂದ ಭದ್ರತಾ ವೈಫಲ್ಯ

ಚಾಮರಾಜನಗರ: ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಮೋಜು-ಮಸ್ತಿ ಮಾಡಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಬಂಡಿಪುರದಲ್ಲಿ ನಡೆದಿದೆ. ಸಾರ್ವಜನಿಕರಿಗೆ ನಿಷೇಧವಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯದೊಳಗೆ ರೌಡಿ ಶೀಟರ್ ಒಬ್ಬ ತನ್ನ ಸಂಗಡಿಗರೊಂದಿಗೆ ರಾಜಾರೋಷವಾಗಿ ಮದ್ಯಸೇವನೆ ಮಾಡಿ ಹುಚ್ಚಾತ್ ಅಮೆರೆದಿದ್ದಾನೆ.

ಅರಣ್ಯ ಇಲಾಖೆಯ ಅತ್ಯಂತ ಸುರಕ್ಷಿತ ಮತ್ತು ನಿರ್ಬಂಧಿತ ವಲಯ ಕಳ್ಳಬೇಟೆ ತಡೆ ಶಿಬಿರದ (APC Camp) ಮುಂಭಾಗದಲ್ಲೇ ಮೋಜು-ಮಸ್ತಿ ಮಾಡಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆ ಪೊಲೀಸ್ ಠಾಣೆಯ ರೌಡಿ ಶೀಟರ್ ಸತೀಶ್ ಎಂಬಾತ ತನ್ನ ಸಂಗಡಿಗರಾದ ಗಂಗಾಧರ್ ಮತ್ತು ಚೇತನ್ ಎಂಬುವವರೊಂದಿಗೆ ಸೇರಿ ಬಂಡೀಪುರ ಅರಣ್ಯದ ಮದ್ದೂರು ವಲಯದ ಹುಲಿಕಟ್ಟೆ ಎಂಬಲ್ಲಿ ಪಾರ್ಟಿ ಮಾಡಿದ್ದಾನೆ. ವನ್ಯಜೀವಿಗಳ ಮುಕ್ತ ಸಂಚಾರವಿರುವ, ಆಂಟಿ ಪೋಚಿಂಗ್ ಕ್ಯಾಂಪ್ ಮುಂಭಾಗದಲ್ಲೇ ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಕುಳಿತಿರುವ ದೃಶ್ಯ ವೈರಲ್ ಆಗಿದೆ. ಈ ಘಟನೆಯು ಬಂಡೀಪುರ ಅರಣ್ಯ ಇಲಾಖೆಯ ಸಂಪೂರ್ಣ ಭದ್ರತಾ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತ್ಯಂತ ಸೂಕ್ಷ್ಮ ಪ್ರದೇಶಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ರೌಡಿ ಶೀಟರ್‌ಗೆ ದಟ್ಟ ಕಾಡಿನೊಳಗೆ ಕಳ್ಳಬೇಟೆ ಶಿಬಿರದವರೆಗೂ ಹೋಗಲು ದಾರಿ ಮಾಡಿಕೊಟ್ಟವರು ಯಾರು? ಅರಣ್ಯ ಇಲಾಖೆ ನಿಯಮ ಉಲ್ಲಂಘನೆ ಮಾಡಿ ಕಾಡಿನೊಳಗೆ ರೌಡಿ ಶೀಟರ್ ಗೆ ಎಣ್ನೆ ಪಾರ್ಟಿಗೆ ಅವಕಾಶ ನೀಡಿದವರ ವಿರುದ್ಧ ಹಾಗೂ ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular