HomeLatest NewsBREAKING: ಬೆಂಗಳೂರಿನಲ್ಲಿ ಬರೋಬ್ಬರಿ 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ವಿದೇಶಿ ಮಹಿಳೆ ಅರೆಸ್ಟ್

BREAKING: ಬೆಂಗಳೂರಿನಲ್ಲಿ ಬರೋಬ್ಬರಿ 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ವಿದೇಶಿ ಮಹಿಳೆ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ಸಿಸಿಬಿ ಪೊಲೀಸರು ಮುಂದುವರೆಸಿದ್ದಾರೆ. ಬರೋಬ್ಬರಿ 10 ಕೋಟಿ ಮೌಲ್ಯದ ಡ್ರಗ್ಸ್ ಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

10 ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣ ಸಂಬಂಧ ವಿದೇಶಿ ಮಹಿಳೆಯನ್ನು ಬಂಧಿಸಲಾಗಿದೆ. ಈಕೆ ನಗರದಲ್ಲಿ ಡ್ರಗ್ಸ್ ಪೆಡ್ಲರ್ ಆಗಿದ್ದಳು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ಯುಸಿನೆಸ್ ವೀಸಾದಲ್ಲಿ ಮೂರು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದ ಬಂಧಿತ ಮಹಿಳೆ ಆರಂಭದಲ್ಲಿ ನವದೆಹಲಿಯಲ್ಲಿ ವಾಸವಾಗಿದ್ದಳು. ಬಳಿಕ ತೆಲಂಗಾಣ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುವುದಾಗಿ ಹೇಳಿ ಎಜುಕೇಷನ್ ವೀಸಾ ಪಡೆದಿದ್ದಳು. ಬಳಿಕ ಕಾಲೇಜಿಗೆ ದಾಖಲಾಗದೇ ಡ್ರಗ್ಸ್ ಪೆಡ್ಲಿಂಗ್ ಗೆ ಇಳಿದಿದ್ದಳು. ಇತ್ತೀಚೆ ಬೆಂಗಳೂರಿಗೆ ಬಂದು ನೆಲೆಸಿದ್ದಳು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular