ಬೆಂಗಳೂರು: ರೌಡಿಸಂಗೆ ಕಡಿವಾಣ ಹಾಕಲು ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರ ಉತ್ತರ ವಿಭಾಗದ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 121 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ರೌಡಿಶೀಟರ್‌ಗಳ ಚಟುವಟಿಕೆಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಪೊಲೀಸರು ಏಕಕಾಲದಲ್ಲಿ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರೌಡಿಶೀಟರ್‌ಗಳಿಗೆ ರೌಡಿಸಂ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರೌಡಿಗಳ ಚಟುವಟಿಕೆ ಮೇಲೆ ಪೊಲೀಸರ ಕಣ್ಣು
ನಗರ ಉತ್ತರ ವಿಭಾಗದಲ್ಲಿ ರೌಡಿಸಂಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹಣದ ವ್ಯವಹಾರ, ಬೆದರಿಕೆ, ಗಲಾಟೆ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಶೀಟರ್‌ಗಳಿಗೆ ಸೂಚನೆ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
13 ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆ ಮೂಲಕ ರೌಡಿಶೀಟರ್‌ಗಳಿಗೆ ಪೊಲೀಸರು ಖಡಕ್ ಸಂದೇಶ ರವಾನಿಸಿದ್ದಾರೆ.

