ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 38.60 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಬ್ರೆಜಿಲ್ ನ ಸೌಪಾಲೊ ಏರ್ ಪೋರ್ಟ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನನ್ನು ಪರಿಶೀಲನೆ ನಡೆಸಿದಾಗ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿತ್ತು. ತಕ್ಷಣ ಆತನನ್ನು ವಶಕ್ಕೆ ಪಡೆದು, ಆತನ ಬ್ಯಾಗ್ ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ಕೊಕೇನ್ ಪತ್ತೆಯಾಗಿದೆ.
ಪ್ರಯಾಣಿಕನ ಬ್ಯಾಗ್ ನಲ್ಲಿ 7.72 ಕೆಜಿ ಕೊಕೇನ್ ಸಿಕ್ಕಿದ್ದು, ಇದು ಬರೋಬ್ಬರಿ 38.60 ಕೋಟಿ ಮೌಲ್ಯದ್ದಾಗಿದೆ ಎಂದು ತಿಳಿದುಬಂದಿದೆ. ಕೊಕೇನ್ ಜಪ್ತಿ ಮಾಡಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

