ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮ್ರಿತಪಟ್ಟಿದ್ದು, ವ್ಯಕ್ತಿಯ ದೇಹ ಛಿದ್ರ ಛಿದ್ರವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಹಾಲ್ದೇನಹಳ್ಳಿಯಲ್ಲಿ ಈ ಘೋರ ದುರಂತ ಸಂಭವಿಸಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ರೈಲು ಹಳಿ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ರೈಲು ಹಳಿ ಹಗೂ ಪಕ್ಕದಲ್ಲಿ ವ್ಯಕ್ತಿಯ ದೇಹ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಪಕ್ಕದಲ್ಲಿಯೇ ಮೊಬೈಲ್ ಹಾಗೂ ಚಪ್ಪಲಿ ಬಿದ್ದಿವೆ. ಘಟನೆ ನಡೆದು ಮೂರು ಗಂಟೆ ಕಳೆದರು ಘಟನಾ ಸ್ಥಳಕ್ಕೆ ಪೊಲೀಸರಾಗಲಿ, ರೈಲ್ವೆ ಅಧಿಕಾರಿಗಳಾಗಲಿ ಭೇಟಿ ನೀಡಿ ಮೃತದೇಹ ತೆರವುಗೊಳಿಸಿಲ್ಲ. ಇದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

