BIG NEWS : ನಾರಾಯಣಗೌಡರನ್ನು ಬಿಡುಗಡೆ ಮಾಡದಿದ್ರೆ ‘ಬೆಂಗಳೂರು ಬಂದ್’ : ಸರ್ಕಾರಕ್ಕೆ ‘ಕರವೇ’ ಎಚ್ಚರಿಕೆ

ಬೆಂಗಳೂರು : ಕರವೇ (ಕರ್ನಾಟಕ ರಕ್ಷಣಾ ವೇದಿಕೆ) ಅಧ್ಯಕ್ಷ ನಾರಾಯಣಗೌಡರನ್ನು ಬಿಡುಗಡೆ ಮಾಡದಿದ್ರೆ ‘ಬೆಂಗಳೂರು ಬಂದ್’ ಗೆ ಕರೆ ನೀಡಬೇಕಾಗುತ್ತದೆ ಎಂದು ಕರವೇ ಸಂಘಟನೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ನಾರಾಯಣಗೌಡ ಸೇರಿದಂತೆ ಬಂಧಿತ ಕರವೇ ಹೋರಾಟಗಾರರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್ಗೆ ಕರೆ ಕೊಡುವ ಕಾಲ ಸನ್ನಿಹಿತ ಆಗುತ್ತದೆ ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಫೆ.28ರ ಒಳಗೆ ವಾಣಿಜ್ಯ ಮಳಿಗೆಗಳ ನಾಮಫಲಕಗಳು ಕನ್ನಡದಲ್ಲಿ ಇರಬೇಕು, ಇಲ್ಲವಾದಲ್ಲಿ ಬೆಂಗಳೂರಿನಲ್ಲಿ ಎಲ್ಲ ಕನ್ನಡ ಸಂಘಟನೆಗಳೂ ಮತ್ತೆ ಬೀದಿಗೆ ಇಳಿಯಲಿವೆ. ಡಾ| ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ.

ಕನ್ನಡದಲ್ಲಿ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರರು ಬೃಹತ್ ಪ್ರತಿಭಟನೆ ನಡೆಸಿದ್ದರು. ಇಂಗ್ಲೀಷ್ ನಾಮಫಲಕ ಧ್ವಂಸ ಮಾಡಿ, ಬೋರ್ಡ್ ಗಳನ್ನು ಕಿತ್ತೊಗೆದು ಭಾರಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಪೊಲೀಸರು ಕರವೇ ನಾರಾಯಣಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read