HomeKarnatakaBIG NEWS: ಹೋಟೆಲ್ ಮೇಲೆ ದಾಳಿ ಪ್ರಕರಣ; ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

BIG NEWS: ಹೋಟೆಲ್ ಮೇಲೆ ದಾಳಿ ಪ್ರಕರಣ; ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಬೆಂಗಳೂರು: ಕಾವೇರಿ ನೀರಿಗಾಗಿ ಸೆ.26ರಂದು ಕರೆ ನೀಡಲಾಗಿದ್ದ ಬೆಂಗಳೂರು ಬಂದ್ ವೇಳೆ ಹೋಟೆಲ್ ಗಳ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಯೋಗೇಶ್ ಹಾಗೂ ಸೋಮಶೇಖರ್ ಬಂಧಿತ ಆರೋಪಿಗಳು. ಬಂದ್ ವೇಳೆ ಗುಂಪೊಂದು ಬಂದು ಕೆಲ ಹೋಟೆಲ್ ಗಳ ಮೇಲೆ ಕಲ್ಲು ತೂರಾಟ ನಡೆಸಿ, ಹಾನಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆ ವೇಳೆ ಬಂಧಿತರಿಬ್ಬರೂ ಬಿಜೆಪಿ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಜಯನಗರ ಎಂಎಲ್ ಎ ರಾಮಮೂರ್ತಿ ಬೆಂಬಲಿಗರು ಎಂದು ತಿಳಿದುಬಂದಿದೆ. ಹೋಟೆಲ್ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಿವು ಹಾಗೂ ವಿಶ್ವ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಇವರಿಬ್ಬರನ್ನು ವಿಚಾರಣೆ ನಡೆಸಿದಾಗ ಯೋಗೇಶ್ ಹಾಗೂ ಸೋಮಶೇಖರ್ ಬಗ್ಗೆ ಬಾಯ್ಬಿಟ್ಟಿದ್ದಾರೆ. ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular