BIG NEWS: ನಾಳೆ ಬೆಂಗಳೂರು ಸಂಪೂರ್ಣ ಬಂದ್; ಟೌನ್ ಹಾಲ್ ನಿಂದ ಹೊರಡಲಿದೆ ರ್ಯಾಲಿ; ಕುರಬೂರು ಶಾಂತಕುಮಾರ್ ಸ್ಪಷ್ಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ನಾಳೆ ಸೆ.26ರಂದು ಕರ್ನಾಟಕ ಜಲಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಮ್ಮೆ ಸ್ಪಷ್ಟಪಡಿಸಿರುವ ರೈತ ಮುಖಂಡ ಕುರಬೂರು ಶಾಂತಕುಮಾರ್, ನಾಳೆ ಬೆಂಗಳೂರು ಸಂಪೂರ್ಣ ಬಂದ್ ಆಗಲಿದೆ. ಬಂದ್ ಗೆ ಬೆಂಬಲ ನೀಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರಿಗೂ ಹೇಳಿದ್ದೇವೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಯಲಿದೆ ಎಂದರು.

ಬಹುತೇಕ ಎಲ್ಲಾ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದು, ಟೌನ್ ಹಾಲ್ ನಿಂದ ಬೃಹತ್ ರ್ಯಾಲಿ ನಡೆಯಲಿದೆ. ಕಾವೇರಿ ನೀರಿಗಾಗಿ ಒಗ್ಗಟ್ಟಿನ ಹೋರಾಟ ಇದಾಗಿದ್ದು, ಸ್ವಯಂಪ್ರೇರಿತವಾಗಿ ಬಂದ್ ನಲ್ಲಿ ಭಾಗವಹಿಸಬೇಕು. ಈ ಮೂಲಕಸ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವಾಗಬೇಕಿದೆ ಎಂದರು.

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಾಳೆ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಖಾಸಗಿ ಬಸ್ ಗಳು, ಓಲಾ, ಊಬರ್, ಆಟೋ ಸೇರಿದಂತೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿವೆ. ಹೋಟೆಲ್, ವ್ಯಾಪಾರ ವಹಿವಾಟು, ಶಾಲೆ-ಕಾಲೇಜುಗಳು, ಶಾಪಿಂಗ್ ಮಾಲ್ ಗಳು, ಜ್ಯುವೆಲರಿ ಶಾಪ್ ಗಳು ಕೂಡ ಬಂದ್ ಆಗಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read