ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದಾಗಿ ಸಂಕಷ್ಟದಲ್ಲಿರುವ ತಾಲೂಕುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಶೀಘ್ರದಲ್ಲೇ 50 ತಾಲೂಕುಗಳನ್ನು ಒಳಗೊಂಡ 2ನೇ ಹಂತದ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪ್ರಜಾಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಜಾಸೇವೆ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಇನ್ಮುಂದೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬರಲಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಶೀಘ್ರದಲ್ಲೇ 50 ತಾಲೂಕುಗಳನ್ನು ಒಳಗೊಂಡ 2ನೇ ಹಂತದ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಹಾಗೂ ಬರದ ಪರಿಣಾಮವನ್ನು ಪರಿಶೀಲಿಸಲಾಗುತ್ತಿದೆ. ಅಗತ್ಯ ಮಾನದಂಡಗಳನ್ನು ಆಧರಿಸಿ ಇನ್ನಷ್ಟು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗುವುದು ಎಂದು ಹೇಳಿದರು.
ಈಗಾಗಲೇ ಬರ ಪರಿಸ್ಥಿತಿ ಎದುರಿಸುತ್ತಿರುವ ಪ್ರದೇಶಗಳಲ್ಲಿ ರೈತರು ಹಾಗೂ ಗ್ರಾಮೀಣ ಜನರಿಗೆ ಅಗತ್ಯ ನೆರವು ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. 2ನೇ ಬರ ಪೀಡಿತ ಪಟ್ಟಿಯಲ್ಲಿ 50 ತಾಲೂಕುಗಳನ್ನು ಸೇರಿಸುವ ಪ್ರಕ್ರಿಯೆ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾದ ಪ್ರದೇಶಗಳಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ಹಾಗೂ ಅಗತ್ಯ ನೆರವು ದೊರೆಯುವ ನಿರೀಕ್ಷೆಯಿದೆ.
ಕರ್ನಾಟಕದಲ್ಲಿ 101 ತಾಲೂಕುಗಳು ಬರಪೀಡಿತ
ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಈ ಪೈಕಿ 89 ತಾಲೂಕುಗಳನ್ನು ತೀವ್ರ ಬರ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ವರ್ಗೀಕರಿಸಲಾಗಿದೆ.
ಜೂನ್ 1ರಿಂದ ಆಗಸ್ಟ್ 26ರವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 666 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ 465 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇ.30ರಷ್ಟು ಕೊರತೆ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.41, ಮಲೆನಾಡಿನಲ್ಲಿ ಶೇ.35, ಉತ್ತರ ಒಳನಾಡಿನಲ್ಲಿ ಶೇ.31 ಹಾಗೂ ಕರಾವಳಿಯಲ್ಲಿ ಶೇ.24ರಷ್ಟು ಮಳೆ ಕೊರತೆಯಾಗಿದೆ.
ಕೇಂದ್ರ ಸರ್ಕಾರದ ಬರ ಕೈಪಿಡಿ-2020ರ ಮಾರ್ಗಸೂಚಿಯಂತೆ 134 ತಾಲೂಕುಗಳು ಆರಂಭಿಕ ಹಂತದಲ್ಲಿ ಅರ್ಹತೆ ಪಡೆದಿದ್ದವು. ಬೆಳೆ ಪರಿಸ್ಥಿತಿ, ಮಣ್ಣಿನ ತೇವಾಂಶ ಸೇರಿದಂತೆ ವಿವಿಧ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಿದ ಬಳಿಕ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲೂಕುಗಳ ಸಮೀಕ್ಷೆ ಪ್ರಗತಿಯಲ್ಲಿದೆ.
ರೈತರಿಗೆ ಬೆಳೆ ವಿಮೆಯಲ್ಲಿ ಅವಕಾಶ
ಮಳೆ ಕೊರತೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದ ರೈತರಿಗೆ ‘ಬಿತ್ತನೆ ತಡೆ’ ವಿಶೇಷ ವರ್ಗದಡಿ ಬೆಳೆ ವಿಮೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿತ್ತು.
ಈ ಬಾರಿ ಫಸಲ್ ಬಿಮಾ ಯೋಜನೆಯಡಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಬೆಳೆಯುವ 49 ಲಕ್ಷ ರೈತರು ಈಗಾಗಲೇ ಬೆಳೆ ವಿಮೆ ಮಾಡಿಸಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಬರದಿಂದಾಗಿ ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಬರಪೀಡಿತ 101 ತಾಲೂಕುಗಳ ಪಟ್ಟಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ತಾಲೂಕುಗಳು ಸೇರಿವೆ.

