HomeKarnatakaBIG NEWS: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ನಿವಾಸಿಗಳಲ್ಲಿ ಆತಂಕ

BIG NEWS: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ನಿವಾಸಿಗಳಲ್ಲಿ ಆತಂಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಭೀತಿ ಶುರುವಾಗಿದೆ. ಬೆಂಗಳೂರಿನ ಜಿಗಣಿ ಪ್ರದೇಶದ ಲೇಔಟ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮುಡಿಸಿದೆ.

ಜಿಗಣಿ ಬಳಿಯ ಕ್ಯಾಲಸನಹಳ್ಳಿಯಲ್ಲಿ ಬೆಳಗಿನ ಜಾವ ಚಿರತೆ ಓಡಾಡಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಾಯಿಗಳು ಬೊಗಳುತ್ತಿದ್ದ ಕಾರಣ ಸಿಸಿಟಿವಿಯಲ್ಲಿ ಗಮನಿಸಿದಾಗ ಚಿರತೆ ಓಡಾಡುತ್ತಿರುವ ದೃಶ್ಯ ಕಂಡುಬಂದಿದೆ.

ಖಾಸಗಿ ಲೇಔಟ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಲ್ಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular