HomeLatest NewsBIG NEWS: ಎಲ್ಲೆಂದರಲ್ಲಿ ಸಿಗರೇಟ್ ಸೇದಿ ಗುಟ್ಕಾ, ತಂಬಾಕು ಉಗುಳುವವರೇ ಎಚ್ಚರಿಕೆ: ಇನ್ಮುಂದೆ ಬೀಳುತ್ತೆ ಭಾರಿ...

BIG NEWS: ಎಲ್ಲೆಂದರಲ್ಲಿ ಸಿಗರೇಟ್ ಸೇದಿ ಗುಟ್ಕಾ, ತಂಬಾಕು ಉಗುಳುವವರೇ ಎಚ್ಚರಿಕೆ: ಇನ್ಮುಂದೆ ಬೀಳುತ್ತೆ ಭಾರಿ ದಂಡ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೀದುವುದು, ಎಲ್ಲೆಂದರಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಇನ್ಮುಂದೆ ಭಾರಿ ದಂಡ ತೆರಬೇಕಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ, ತಂಬಾಕು ಉಗುಳಿದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ಈ ಬಗ್ಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ- ಕರ್ನಾಟಕ ತಿದ್ದುಪಡಿ ಮಸೂದೆ-2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 23ರಂದು ಅಂಕಿತ ಹಾಕಿದ್ದು, ಈ ಕುರಿತು ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಸರ್ಕಾರ ಕಾಯ್ದೆ ಜಾರಿಗೆ ತಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟ ನಿಷೇದಿಸಲಾಗಿದೆ. ಕಾಯ್ದೆ ಉಲ್ಲಂಘಿಸಿದರೆ 1000 ರೂಪಾಯಿ ದಂಡ ವಿಧಿಸಲಾಗುತ್ತದೆ. ಅಲ್ಲದೇ ಹೋಟೆಲ್, ಪಬ್, ಬಾರ್ ಅಥವಾ ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಸೇವನೆಗೂ ನಿಷೇಧ ಹೇರಲಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ 50,000 ರೂಪಾಯಿಯಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular