HomeKarnatakaಸೈಟ್ ಖರೀದಿಸುವವರಿಗೆ ಮುಖ್ಯ ಮಾಹಿತಿ: ಅನಧಿಕೃತ ಬಡಾವಣೆಗಳ ನಿವೇಶನ ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ...

ಸೈಟ್ ಖರೀದಿಸುವವರಿಗೆ ಮುಖ್ಯ ಮಾಹಿತಿ: ಅನಧಿಕೃತ ಬಡಾವಣೆಗಳ ನಿವೇಶನ ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಪತ್ರ ಬರೆದ ಬಿಡಿಎ

ಬೆಂಗಳೂರು: ಅನಧಿಕೃತ ಅಕ್ರಮ ಬಡಾವಣೆಗಳ ನಿವೇಶನಗಳನ್ನು ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿದೆ. ಗ್ರಾಹಕರು ದುಬಾರಿ ಬೆಲೆಗೆ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ ಖರೀದಿಸಿ ಮುಂದೆ ತೊಂದರೆ ಅನುಭವಿಸುವುದನ್ನು ತಪ್ಪಿಸಲು ಬಿಡಿಎ ಈ ಕ್ರಮ ಕೈಗೊಂಡಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ 279 ಅನಧಿಕೃತ ಬಡಾವಣೆಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಯಲಹಂಕ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ತಾಲೂಕುಗಳ ವಲಯಗಳಲ್ಲಿ ನೂರಾರು ಸರ್ವೇ ನಂಬರ್ ಗಳಲ್ಲಿ ಲೇಔಟ್ ರಚನೆಗೆ ಬಿಡಿಎ ಯಾವುದೇ ರೀತಿಯ ಅನುಮೋದನೆ ನೀಡದಿದ್ದರೂ ಕೆಲವು ಬಿಲ್ಡರ್ ಗಳು ಕಾನೂನು ಉಲ್ಲಂಘಿಸಿ ಅಕ್ರಮವಾಗಿ ಬಡಾವಣೆಗಳನ್ನು ನಿರ್ಮಿಸಿದ್ದಾರೆ.

ಈ ಅನಧಿಕೃತ ಬಡಾವಣೆಗಳನ್ನು ಗುರುತಿಸಿರುವ ಬಿಡಿಎ ಯಾವ ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣವಾಗುತ್ತಿದೆ ಎಂಬುದನ್ನು ದಾಖಲೆ ಸಹಿತ ವರದಿ ಸಿದ್ದಪಡಿಸಿದೆ. ಇವುಗಳ ಪಟ್ಟಿಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ರೀತಿಯ 279 ಅನಧಿಕೃತ ಬಡಾವಣೆಗಳನ್ನು ನಿರ್ಮಿಸಲಾಗಿದೆ. ಈ ಬಡಾವಣೆಗಳಲ್ಲಿ 27 ಸಾವಿರಕ್ಕೂ ಹೆಚ್ಚು ನಿವೇಶನಗಳಿವೆ. ಇಂತಹ ಬಡಾವಣೆಗಳ ನಿವೇಶನಗಳನ್ನು ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಬಿಡಿಎ ಪತ್ರ ಬರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular