HomeKarnatakaBIG NEWS: ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಪ್ರಕರಣ: ಮಾಲೀಕ ನಾಪತ್ತೆ; FIR...

BIG NEWS: ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಪ್ರಕರಣ: ಮಾಲೀಕ ನಾಪತ್ತೆ; FIR ದಾಖಲು

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವತಿ ಸಜೀವದಹನವಾಗಿದ್ದು, ಘಟನೆ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದಾನೆ.

ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ ಪುನೀತ್ ಗೌಡ ನಾಪತ್ತೆಯಾಗಿದ್ದು, ಪೊಲೀಸರು ಎಫ್ಐಆರ್ ದಾಖಲಾಗಿದೆ. ದುರಂತದಲ್ಲಿ ಸಜೀವದಹನವಾಗಿದ್ದ ಯುವತಿ ಪ್ರಿಯಾ ಸಹೋದರ ಪ್ರತಾಪ್ ನೀಡಿರುವ ದೂರಿನ ಮೇರೆಗೆ ಶೋ ರೂಂ ಮಾಲೀಕ, ಮ್ಯಾನೇಜರ್ ವಿರುದ್ಧ ಬಿಎನ್ ಎಸ್ ಸೆಕ್ಷನ್ 106ರಡಿ ಪ್ರಕರಣ ದಾಖಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆಯೇ? ಅಥವಾ ಇವಿ ಬೈಕ್ ಬ್ಯಾಟರಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆಯೇ? ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಕಿಯಿಂದಾಗಿ ಬೈಕ್ಗಳು ಸುಟ್ಟು ಕರಕಲಾಗಿದ್ದು, ಕಟ್ಟಡಕ್ಕೂ ಹಾನಿಯಾಗಿದೆ. ಘಟನೆ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ವೈಜ್ಞಾನಿಕವಾಗಿ ಪರಿಶಿಲನೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular