HomeKarnatakaಕೈಗಾರಿಕಾ ಪ್ರದೇಶಗಳ ಸಮಸ್ಯೆ ಪರಿಹಾರಕ್ಕೆ ಟಾಸ್ಕ್ ಫೋರ್ಸ್ ರಚನೆ

ಕೈಗಾರಿಕಾ ಪ್ರದೇಶಗಳ ಸಮಸ್ಯೆ ಪರಿಹಾರಕ್ಕೆ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಕೈಗಾರಿಕಾ ಪ್ರದೇಶಗಳ ವಿವಿಧ ಸಮಸ್ಯೆಗಳ ಪರಿಹರಿಸುವ ಸಂಬಂಧ  ವಿವಿಧ ಇಲಾಖೆಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಸಮಿತಿಯನ್ನು ಶೀಘ್ರವಾಗಿ ರಚಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅವರು ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ(ಎಫ್ಕೆಸಿಸಿಐ) ವತಿಯಿಂದ ಆಯೋಜಿಸಿದ್ದ ಸಂವಾದ ಸಭೆಯಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿನ ವಿವಿಧ ಸಮಸ್ಯೆಗಳ ಕುರಿತು ಉದ್ಯಮಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಅವರು ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸಲು ಸಂಬಂಧ  ಇಲಾಖೆಗಳ ಸಮನ್ವಯ ಅಗತ್ಯವಾಗಿದೆ ಎಂದರು.

ಕೈಗಾರಿಕಾ ಪ್ರದೇಶಗಳಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳನ್ನು ಕೈಗೊಳ್ಳುವಾಗ ಹಾಗೂ ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ ಮತ್ತು ಕೆಇಬಿ ವತಿಯಿಂದ ರಸ್ತೆ ಅಗೆದು ಕಾಮಗಾರಿ ನಡೆಸುವ ಸಂದರ್ಭದಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಪೂರ್ವ ಮಾಹಿತಿ ನೀಡದೆ ಇರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಎಫ್ .ಕೆ.ಸಿ.ಸಿ.ಐ ನ ಸದಸ್ಯರುಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಣ್ಣ ಕೈಗಾರಿಕೆಗಳಿಗೆ ಸಮರ್ಪಕ ನೀರು ಪೂರೈಕೆಯಾಗದಿರುವುದು, ಮಳೆ ನೀರು ಕೈಗಾರಿಕಾ ಪ್ರದೇಶಗಳಿಗೆ ನುಗ್ಗುತ್ತಿರುವುದು, ಪಾದಚಾರಿ ಮಾರ್ಗಗಳ ಸಮರ್ಪಕ ನಿರ್ವಹಣೆ ಹಾಗೂ ಒತ್ತುವರಿ ತೆರವು, ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಎಲ್ಲ ಸಮಸ್ಯೆಗಳ ಕುರಿತು ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ, ಕೆಇಬಿ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಕರೆದು ವಿಷಯವಾರು ಚರ್ಚಿಸಲಾಗುವುದು. ಟಾಸ್ಕ್ಫೋರ್ಸ್ ಸಮಿತಿಯನ್ನು ರಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಭೆಯಲ್ಲಿ ಸಮಸ್ಯೆಗಳಿಗೆ ಪ್ರಮುಖ ಆದ್ಯತೆ ನೀಡಿ ಸೂಕ್ತ  ಕ್ರಮ ಕೈಗೊಳ್ಳುವ ಮೂಲಕ ಕೈಗಾರಿಕಾ ಪ್ರದೇಶಗಳಲ್ಲಿರುವ ಮೂಲಸೌಕರ್ಯವನ್ನು ಸುಧಾರಿಸಲಾಗುವುದು. ಒಂದು ವೇಳೆ ಯಾವುದಾರು ನೀತಿಗಳನ್ನು ಜಾರಿಗೆ ತರಬೇಕಾದ ಪಕ್ಷದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾಧಿಕಾರಿರಗಳು ತಿಳಿಸಿದರು.

ಸಭೆಯಲ್ಲಿ ಎಫ್ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಹಿರಿಯ ಉಪಾಧ್ಯಕ್ಷರಾದ ಟಿ. ಸಾಯಿರಾಂ ಪ್ರಸಾದ್, ಮಾಜಿ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ, ಮೂಲಸೌಕರ್ಯ ಮತ್ತು ನಾಗರಿಕ ಸಮಿತಿ ಅಧ್ಯಕ್ಷ ಕೆ.ವಿ. ರಾಜೇಂದ್ರ ಕುಮಾರ್ ಸೇರಿದಂತೆ ಸಂಸ್ಥೆಯ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕೈಗಾರಿಕಾ ಕ್ಷೇತ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular