ಬೆಂಗಳೂರಿನಲ್ಲಿ ಮಾಂಸ ಮಾರಾಟ ಪ್ರಕರಣ: ನನ್ನ ವಿರುದ್ಧ ಮಾತನಾಡಿದವರ ಮೇಲೆ ಮಾನನಷ್ಟ ಕೇಸ್ ದಾಖಲು; ಅಬ್ದುಲ್ ರಜಾಕ್ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಕುರಿ ಮಾಂಸದ ಜೊತೆ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಕೇಸ್ ದಾಖಲಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ದುಲ್ ರಜಾಕ್, ನನ್ನ ವಿರುದ್ಧ ಆರೋಪ ಮಾಡಿ ಮಾತನಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಸೋಮವಾರ ಕಮಿಷ್ನರ್ ಭೇಟಿಯಾಗಿ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.

ನಾವು ಯಾವುದೇ ರೀತಿ ಅಕ್ರಮ ವ್ಯವಹಾರ ಮಾಡಿಲ್ಲ. ರೋಲ್ ಕಾಲ್ ಕೊಡಲ್ಲ ಅಂದಿದ್ದಕ್ಕೆ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಬಿಜೆಪಿಯವರು ಪುನೀತ್ ಕೆರೆಹಳ್ಳಿ ಸಪೋರ್ಟ್ ಗೆ ನಿಂತಿದ್ದರು. ನಾನು ಕಾಂಗ್ರೆಸ್ ಕಾರ್ಯಕರ್ತನೂ ಅಲ್ಲ, ಪಕ್ಷದವನೂ ಅಲ್ಲ. ಬೆಂಬಲಿಗ ಅಷ್ಟೇ. ಈ ಕಾರಣಕ್ಕೆ ಸರ್ಕಾರದ ವಿರುದ್ಧ ಕೆಟ್ಟ ಹೆಸರು ತರಬೇಕು ಎಂಬ ಕಾರಣಕ್ಕೆ ಕೆಲವರು ಕುತಂತ್ರ ನಡೆಸಿದ್ದಾರೆ ಎಂದು ಕಿಡಿಕಾರಿದರು.

ನಾನು ಕಳೆದ 12 ವರ್ಷಗಳಿಂದ ವ್ಯವಹಾರ ನಡೆಸಿಕೊಂಡು ಬರುತ್ತಿದ್ದೇನೆ. ನಾವು ಯಾವುದೇ ಅಕ್ರಮ ನಡೆಸುತ್ತಿಲ್ಲ. ನೆಮ್ಮದಿಯಾಗಿ ವ್ಯವಹಾರ ನಡೆದು ಹೋಗುತ್ತಿದ್ದಾಗ ಯಾರೋ ಕಿಡಿಗೇಡಿಗಳು ಬಂದು ಆರೋಪ ಮಾಡಿ ತೇಜೋವಧೆ ಮಾಡುತ್ತಿದ್ದಾರೆ. ನನ್ನ ವಿರುದ್ಧ ಆರೋಪ ಮಾಡಿ ಮಾತನಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ತಿಳಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read