HomeKarnatakaBIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ; ರಸ್ತೆ ಮಧ್ಯೆಯೇ ಹೊತ್ತಿ ಉರಿದ...

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ; ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು; ಓರ್ವ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರು ಹಾಗೂ ಅಪರಿಚಿತ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಆನೇಕಲ್ ಮೂಲದ ಕಿಶೋರ್ ಬಾಬು (45) ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಿ, ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಕಾರು ತೆರಳುತ್ತಿತ್ತು ಈ ವೇಳೆ ಅಪಘಾತ ಸಂಭವಿಸಿದ್ದು, ಶ್ರೀರಂಗಪಟ್ಟಣದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular