HomeLatest NewsBIG NEWS: ಪೊಲೀಸ್ ಸಿಬ್ಬಂದಿಗಳಿಗೆ ಕಮಿಷ್ನರ್ ಬಿ. ದಯಾನಂದ್ ವಾರ್ನಿಂಗ್

BIG NEWS: ಪೊಲೀಸ್ ಸಿಬ್ಬಂದಿಗಳಿಗೆ ಕಮಿಷ್ನರ್ ಬಿ. ದಯಾನಂದ್ ವಾರ್ನಿಂಗ್

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ವಾರ್ನಿಂಗ್ ಕೊಟ್ಟಿದ್ದಾರೆ.

ಆಡುಗೋಡಿ ಸಿಎಆರ್ ಮೈದಾನದಲ್ಲಿ ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಕಮಿಷನರ್ ದಯಾನಂದ್, ವರ್ಗಾವಣೆ ವಿಚರವಾಗಿ ಸಾಕಷ್ಟು ಸಿಬ್ಬಂದಿಗಳು ಕಚೇರಿಗೆ ಬರುತ್ತಿದ್ದಾರೆ. ಸರಿಯಾದ ಸಮಯದಲ್ಲಿ ನಾವೇ ವರ್ಗಾವಣೆಯನ್ನು ಮಾಡುತ್ತೇವೆ. ಕಚೇರಿಗೆ ಬರುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಪ್ರತಿದಿನ ಸಿಬ್ಬಂದಿ ಕವೇರಿಗೆ ಬರುವುದರಿಂದ ಇದೇ ಕೆಲಸವಾಗಿಬಿಡುತ್ತೆ. ಇದನ್ನು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ನಿಮ್ಮನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular