ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಮತ್ತೆ ಅವಾಂತರಗಳು ಸೃಷ್ಟಿಯಾಗಿವೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ದಟ್ಟವಾದ ಮೋಡಕವಿದ ವಾತಾವರಣ, ಅಲ್ಲಲ್ಲಿ ಮಳೆಯಾಗುತ್ತಿತ್ತು. ಮಧ್ಯಾಹ್ನದ ಬಳಿಕ ನಗರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ವೀಕೆಂಡ್ ಸಂದರ್ಭದಲ್ಲಿ ಹೊರ ಹೊಗಿದ್ದ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ವಿಧಾನಸೌಧ, ರೇಸ್ ಕೋರ್ಸ್ ರಸ್ತೆ, ಶೇಶಾದ್ರಿಪುರಂ, ಮಲ್ಲೇಶ್ವರಂ, ಮೆಜೆಸ್ಟಿಕ್, ಕೆ.ಆರ್.ಪುರಂ, ಜಯನಗರ, ಜೆ.ಪಿ.ನಗರ, ಬನಶಂಕರಿ, ಮೈಸೂರು ರಸ್ತೆ, ಗಿರಿನಗರ, ಆರ್.ಆರ್.ನಗರ, ಉತ್ತರಹಳ್ಳಿ, ಶಾಂತಿನಗರ, ವಿಜಯನಗರ, ರಾಜಾಜಿನಗರ, ಕೆಂಗೇರಿ ಸೇರಿದಂತೆ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ತಗ್ಗು ಪ್ರದೇಶ, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನಸವಾರರು ಪರದಾಡುವಂತಾಗಿದೆ.