HomeLatest NewsBREAKING : 'ಬೆಂಗಳೂರು ಕಾಲ್ತುಳಿತ ದುರಂತ' ಕೇಸ್ : ADGP 'ಹೇಮಂತ್ ನಿಂಬಾಳ್ಕರ್' ವರ್ಗಾವಣೆ ಮಾಡಿ...

BREAKING : ‘ಬೆಂಗಳೂರು ಕಾಲ್ತುಳಿತ ದುರಂತ’ ಕೇಸ್ : ADGP ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಗುಪ್ತಚರ ಇಲಾಖೆ ಎಡಿಜಿಪಿ ಆಗಿ ರವಿಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 47 ಹೆಚ್ಚು ಜನ ಗಾಯಗೊಂಡಿದ್ದರು. ಘಟನೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿದ್ದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್, ಸ್ಟೇಷನ್ ಹೌಸ್ ಆಫೀಸರ್, ಸೆಂಟ್ರಲ್ DCP, ACP, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು.ಇದೀಗ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular