HomeKarnatakaBREAKING: ಮನಮೋಹನ್ ಸಿಂಗ್ ನಿಧನ ಹಿನ್ನಲೆ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ

BREAKING: ಮನಮೋಹನ್ ಸಿಂಗ್ ನಿಧನ ಹಿನ್ನಲೆ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ.

ಶುಕ್ರವಾರ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾಲಯ ಮುಂದೂಡಿವೆ.

ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಇಂದು ನಡೆಯಬೇಕಿತ್ತು. ರಜೆಯ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ವೆಬ್ ಸೈಟ್ ನಲ್ಲಿ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗೆಯೇ ಮೈಸೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಕುಲಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular