ಪರೀಕ್ಷೆ ಮುಗಿದ ಆರೇ ದಿನದಲ್ಲಿ 26 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ ದಾಖಲೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪದವಿ ಕೋರ್ಸುಗಳ 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶವನ್ನು ಪರೀಕ್ಷೆ ಮುಗಿದ ಆರೇ ದಿನದಲ್ಲಿ ಪ್ರಕಟಿಸಲಾಗಿದೆ.

ವಿಶ್ವವಿದ್ಯಾಲಯ ವತಿಯಿಂದ ಬಿಕಾಂ, ಬಿಬಿಎ ಮತ್ತು ಬಿಸಿಎ ಕೋರ್ಸ್ ಗಳ ಎನ್ಇಪಿ ಒಟ್ಟು 26,632 ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶವನ್ನು ಬೆಂಗಳೂರು ವಿವಿ ಮತ್ತು ಕಾಲೇಜುಗಳ ಏಕೀಕೃತ ನಿರ್ವಹಣಾ ವ್ಯವಸ್ಥೆ(ಯುಯು ಸಿಎಂಎಸ್) ಪೋರ್ಟಲ್ ನಲ್ಲಿ ಮಂಗಳವಾರ ಪ್ರಕಟಿಸಲಾಗಿದೆ.

ಜುಲೈ 10 ರಿಂದ ಆಗಸ್ಟ್ 14ರ ವರೆಗೆ ಪರೀಕ್ಷೆ ನಡೆಸಲಾಗಿತ್ತು. ನಂತರದ ಆರು ದಿನಗಳಲ್ಲಿ ಫಲಿತಾಂಶ ಪ್ರಕಟಿಸಿರುವುದು ದಾಖಲೆಯಾಗಿದೆ. ಇದಕ್ಕೆ ಕಾರಣರಾದ ವಿವಿಯ ಮೌಲ್ಯಮಾಪನ ಕುಲಸಚಿವರು ಸೇರಿ ವಿಭಾಗದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕುಲಪತಿ ಡಾ. ಎಸ್.ಎಂ. ಜಯಕರ ಅಭಿನಂದಿಸಿದ್ದಾರೆ. ಬಿಎಸ್ಸಿ, ಬಿಎ ಕೋರ್ಸ್ ಗಳ ಪರೀಕ್ಷಾ ಮೌಲ್ಯಮಾಪನ ಪ್ರಗತಿಯಲ್ಲಿದ್ದು, ಶೀಘ್ರವೇ ಫಲಿತಾಂಶ ಪ್ರಕಟಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read