HomeLive NewsBREAKING: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರಿಂದಲೇ ಲೈಂಗಿಕ ಕಿರುಕುಳ: FIR ದಾಖಲು

BREAKING: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರಿಂದಲೇ ಲೈಂಗಿಕ ಕಿರುಕುಳ: FIR ದಾಖಲು

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಜ್ಞನಭಾರತಿ ಪೊಲೀಸ್ ಠಾಣೆಯಲ್ಲಿ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅತಿಥಿ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಅತಿಥಿ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡೋ ಉಪನ್ಯಾಸಕರೇ ಕಾಲೇಜಿಗೆ ಕುಡಿದು ಬಂದು ಡ್ಯಾನ್ಸ್ ಮಾಡುತ್ತಿರುವ, ಅಂಧ ವಿದ್ಯಾರ್ಥಿನಿಯನ್ನು ಎತ್ತಿಕುಂಡು ಕುಣಿಯುತ್ತಿರುವ ವಿಡಿಯೋಗಳು ವೈರಲ್ ಆಗಿವೆ.

ಕುಡಿದು ಬಂದು ಅತಿಥಿ ಉಪನ್ಯಾಸಕ ರಾಮಾಂಜನೇಯ, ವಿವಿ ಆವರಣದಲ್ಲಿ ಶರ್ಟ್ ಬಿಚ್ಚಿ ಡ್ಯಾನ್ಸ್ ಮಾಡಿದ್ದಾನೆ. ಅಲ್ಲದೇ ರಾಮಾಂಜನೇಯ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ, ಅಂಬೇಡ್ಕರ್ ಜಯಂತಿ ಆಚರಣೆ ವೇಳೆ ವಿದ್ಯಾರ್ಥಿನಿ ಜೊತೆ ಡ್ಯಾನ್ಸ್, ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿವೆ.

For Latest News Updates, Join Our Whatsapp Community🚩
RELATED ARTICLES

Most Popular