Bangalore University : ನಾಳೆ ಬೆಂಗಳೂರು ವಿವಿ ಬಂದ್ : ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಮೂಲಭೂತ ಸೌಕರ್ಯಗೆ ಆಗ್ರಹಿಸಿ ವಿವಿ ಬಂದ್ ಗೆ ಕರೆ ನೀಡಲಾಗಿದ್ದು, ನಾಳೆ ವಿದ್ಯಾರ್ಥಿಗಳು ತರಗತಿಗಳ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.

ಬೆಂಗಳೂರು ವಿವಿ ಆಡಳಿತ ವಿಭಾಗ ಉದ್ದೇಶಪೂರ್ವಕವಾಗಿ ಮೂಲಭೂತ ಸೌಕರ್ಯಗಳನ್ನು ತಡೆಹಿಡಿದಿದೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದು, ನಾಳೆ ವಿವಿ ಬಂದ್ ಗೆ ಕರೆ ನೀಡಲಾಗಿದೆ.

ವಿವಿಯ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳನ್ನು ಈ ಕೂಡಲೇ ನೀಡಬೇಕೆಂದು ವಿವಿಗೆ ಸೂಚಿಸಲು ಉನ್ನತ ಶಿಕ್ಷಣ ಇಲಾಖೆಗೆ ಆಗ್ರಹಿಸಿ ನಾಳೆ (ಜು.11) ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳು ನಿರ್ಧರಿಸಿದ್ದು, ತರಗತಿಗಳನ್ನು ಬಹಿಷ್ಕಾರ ಮಾಡಲಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read