HomeKarnatakaಬೆಂಗಳೂರು ಆಗಲಿದೆ ಇನ್ನಷ್ಟು ಗ್ರೇಟ್, ಅದರ ಕೀರ್ತಿ ತಲುಪಲಿದೆ ಮತ್ತಷ್ಟು ಹೈಟ್ : DCM ಡಿಕೆ...

ಬೆಂಗಳೂರು ಆಗಲಿದೆ ಇನ್ನಷ್ಟು ಗ್ರೇಟ್, ಅದರ ಕೀರ್ತಿ ತಲುಪಲಿದೆ ಮತ್ತಷ್ಟು ಹೈಟ್ : DCM ಡಿಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರದ ಸುತ್ತ 6 ಉಪನಗರಗಳನ್ನು ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಬೆಂಗಳೂರು ಆಗಲಿದೆ ಇನ್ನಷ್ಟು ಗ್ರೇಟ್, ಅದರ ಕೀರ್ತಿ ತಲುಪಲಿದೆ ಮತ್ತಷ್ಟು ಹೈಟ್ ಎಂದು ಹೇಳಿದ್ದಾರೆ.

ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಸ್ಯಾಟಲೈಟ್ ಟೌನ್ಶಿಪ್ ಗಳನ್ನಾಗಿ ಅಭಿವೃದ್ಧಿಪಡಿಸುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ ರಾಮನಗರ ತಾಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ. ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಭಾಗಶ: ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ’ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ’ ಯೋಜನೆಯನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular