HomeKarnatakaBIG NEWS: 24 ಗಂಟೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ 16 ಕಡೆ ಅಪಘಾತ; ಐವರು ದುರ್ಮರಣ

BIG NEWS: 24 ಗಂಟೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ 16 ಕಡೆ ಅಪಘಾತ; ಐವರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 16 ಸ್ಥಳಗಳಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ರಾಜಾಜಿನಗರ, ಬಸವನಗುಡಿ, ಹೆಣ್ಣೂರು, ವೈಟ್ ಫೀಲ್ಡ್, ಹುಳಿಮಾವುಗಳಲ್ಲಿ ತಲಾ ಎರಡು ಸ್ಥಳಗಳಲ್ಲಿ ಅಪಘಾತ ಪ್ರಕರಣಗಳು ದಾಖಲಾಗಿವೆ. ಹೆಬ್ಬಾಳ, ಸದಾಶಿವನಗರ, ಕೆ.ಆರ್.ಪುರಂ ನಲ್ಲಿ ತಲಾ ಒಂದು ಅಪಘಾತ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 16 ಕಡೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ, ಯುವಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಒಟ್ಟು 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular