HomeKarnatakaಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್' ಗೆ ಚಾಲನೆ..! ಏನಿದರ ವಿಶೇಷತೆ

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್’ ಗೆ ಚಾಲನೆ..! ಏನಿದರ ವಿಶೇಷತೆ

ಬೆಂಗಳೂರು : ಬೆಂಗಳೂರಿನ ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್’ವರೆಗೆ ನಿರ್ಮಾಣವಾಗಿರುವ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್’ನ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ”ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಹೊಸ ಮಾದರಿಯಲ್ಲಿ ನಗರದ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು 450 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡಬಲ್ ಡೆಕ್ಕರ್ ಪ್ಲೈಓವರ್ ಅನ್ನು ನಿರ್ಮಿಸಲಾಗಿದೆ. ನಾನು ಮಹಾರಾಷ್ಟ್ರದ ನಾಗ್ಪುರಕ್ಕೆ ಭೇಟಿ ನೀಡಿದಾಗ ಅಲ್ಲಿಯೂ ಇಂತಹ ಪ್ರಯೋಗಗಳಾಗಿರುವುನ್ನು ಗಮನಿಸಿದ್ದು, ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿಇವು ಸಹಕಾರಿಯಾಗಿವೆ”.

”ವಿಶ್ವದರ್ಜೆಯ ಈ ಪ್ಲೈಓವರ್’ನಿಂದ ಟ್ರಾಫಿಕ್ ಕಡಿಮೆಯಾಗಲಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ. ಅಲ್ಲದೆ ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರವಹಿಸಲಿದೆ. ರಾಗಿಗುಡ್ಡದಿಂದ ಇನ್ಮುಂದೆ ಸಿಗ್ನಲ್ ಇಲ್ಲದೆ ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಪ್ರಯಾಣಿಸಲು ಅವಕಾಶ ಸಿಗಲಿದೆ. ಬೆಂಗಳೂರಿನಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಮೆಟ್ರೋ ನಿಲ್ದಾಣಗಳಲ್ಲಿಯೂ ಈ ರೀತಿಯ ಡಬಲ್ ಡೆಕ್ಕರ್ ಪ್ಲೈಓವರ್ ನಿರ್ಮಾಣ ಮಾಡಲಿದ್ದು, ಈ ಕುರಿತು ಚರ್ಚಿಸಿ ಕಾರ್ಯರೂಪಕ್ಕೆ ತರಲು ನಾವು ಬದ್ಧರಾಗಿದ್ದೇವೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷವಾಗಿ ರಾಗಿಗುಡ್ಡ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್ ರಸ್ತೆಯ ಉದ್ದಕ್ಕೂ ಸಂಚಾರ ದಟ್ಟಣೆಯನ್ನು ನಿವಾರಿಸುವಲ್ಲಿ, ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಲಿದೆ. ರಾಗಿಗುಡ್ಡದಿಂದ ಪ್ರಯಾಣಿಸುವವರು ಇನ್ನು ಮುಂದೆ ಸಿಗ್ನಲ್ ಇಲ್ಲದೆ ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಪ್ರಯಾಣಿಸಬಹುದಾಗಿದೆ. ಇದು ಹೆಚ್ಎಸ್ಆರ್ ಲೇಔಟ್ ಮತ್ತು ಹೊಸೂರು ರಸ್ತೆಗೆ ಸುಗಮ ಸಂಪರ್ಕವನ್ನು ಒದಗಿಸಲಿದೆ . ಪ್ರೈಓವರ್ನ ಕೆಳ ಸ್ತರದಲ್ಲಿ ವಾಹನಗಳು ಸಂಚರಿಸಲಿದ್ದು, ಮೇಲ್ಸ್ತರದಲ್ಲಿ ಮೆಟ್ರೋ ರೈಲು ಸಂಚರಿಸಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular