HomeKarnatakaBIG NEWS: ಬೆಂಗಳೂರು ಬಂದ್ ಗೆ ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ ಘೋಷಣೆ

BIG NEWS: ಬೆಂಗಳೂರು ಬಂದ್ ಗೆ ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ ಘೋಷಣೆ

ಬೆಂಗಳೂರು: ಕಾವೇರಿ ನೀರಿಗಾಗಿ ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹೋಟೆಲ್ ಮಾಲೀಕರ ಸಂಘವೂ ಬೆಂಬಲ ಘೋಷಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ, ಸೆ.26ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ಸೂಚಿಸಿದೆ. ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲವಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆ.26ರ ಬೆಂಗಳೂರು ಬಂದ್ ಗೆ ಈಗಾಗಲೇ ಓಲಾ, ಊಬರ್ ಕ್ಯಾಬ್ ಸಂಘಟನೆಗಳು ಹಾಗೂ ಖಾಸಗಿ ಶಾಲೆಗಳ ಒಕ್ಕೂಟ ಸೇರಿದಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಘೋಷಿಸಿದ್ದು, ಬೆಂಗಳೂರು ಸಂಪೂರ್ಣ ಬಂದ್ ಆಗುವುದು ಬಹುತೇಕ ಖಚಿತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular