HomeCrimeBREAKING: ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಲೇಡಿಸ್ ಪಿಜಿಗೆ ನುಗ್ಗಿ ಯುವತಿ ಕತ್ತು ಕೊಯ್ದು...

BREAKING: ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಲೇಡಿಸ್ ಪಿಜಿಗೆ ನುಗ್ಗಿ ಯುವತಿ ಕತ್ತು ಕೊಯ್ದು ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕತ್ತು ಕೊಯ್ದು ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋರಮಂಗಲದ ವಿಆರ್ ಲೇಔಟ್ ನಲ್ಲಿ ಘಟನೆ ನಡೆದಿದೆ.

ಬಿಹಾರ ಮೂಲದ ಕೃತಿ ಕುಮಾರಿ(24) ಕೊಲೆಯಾದ ಯುವತಿ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ರಾತ್ರಿ 11 ಗಂಟೆ 10 ನಿಮಿಷದಿಂದ 11:30 ನಡುವೆ ಕೃತ್ಯ ನಡೆದಿದೆ.

ರಾತ್ರಿ 11:10ಕ್ಕೆ ಯುವಕನೊಬ್ಬ ಲೇಡೀಸ್ ಪಿಜಿ ಒಳಗೆ ಆಗಮಿಸಿದ್ದಾನೆ. ಚಾಕು ಇಟ್ಟುಕೊಂಡು ಬಂದಿದ್ದ ಯುವಕ ಮೂರನೇ ಮಹಡಿಯಲ್ಲಿರುವ ಕೊಠಡಿಯ ಬಳಿ ಕೃತಿ ಕುಮಾರಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಕತ್ತು ಕೊಯ್ದು ಹತ್ಯೆ ಮಾಡಿರುವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪರಿಚಯಸ್ಥ ಯುವಕನಿಂದ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಜಿ ಮಾಲೀಕರ ನಿರ್ಲಕ್ಷವೇ ಘಟನೆಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಗ್ನೇಯ ವಿಭಾಗದ ಸಾರಾ ಫಾತಿಮಾ ಅವರೂ ಪರಿಶೀಲನೆ ನಡೆಸಿದ್ದಾರೆ. ಸಿಸಿ ಟಿವಿ ದೃಶ್ಯ ಆಧರಿಸಿ ಆರೋಪಿ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular