HomeKarnatakaBIG NEWS: ರೆಡ್ ಹ್ಯಾಂಡ್ ಆಗಿ CCB ಬಲೆಗೆ ಬಿದ್ದ ವಿದೇಶಿ ಡ್ರಗ್ ಪೆಡ್ಲರ್

BIG NEWS: ರೆಡ್ ಹ್ಯಾಂಡ್ ಆಗಿ CCB ಬಲೆಗೆ ಬಿದ್ದ ವಿದೇಶಿ ಡ್ರಗ್ ಪೆಡ್ಲರ್

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು, ರಾಜಧಾನಿ ಬೆಂಗಳೂರಿನಲ್ಲಿ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

ಕ್ರಿಸ್ಟೋಫರ್ (20) ಬಂಧಿತ ಆರೋಪಿ. ಚಿಕ್ಕಬಾಣಾವರದ ಕೆರೆಗುಡ್ಡ ಬಳಿ ಕ್ರಿಸ್ಟೋಫರ್ ಡ್ರಗ್ ಮಾರಾಟ ಮಾಡುತ್ತಿದ್ದ. ಈ ವೇಳೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಕುರಮ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತನಿಂದ 50 ಲಕ್ಷಕ್ಕೂ ಹೆಚ್ಚು ಮೌಲ್ಯದ MDMA ಕ್ರಿಸ್ಟಲ್ ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ ಕ್ರಿಸ್ಟೋಫರ್ ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿಯೇ ನೆಲೆಸಿದ್ದ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular