ಮೈಸೂರು: ಈ ವರ್ಷದ ಅಂತ್ಯದೊಳಗೆ ರಾಜ್ಯದಲ್ಲಿ 16 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿ ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
*ಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಂದ ಅರ್ಜಿ
ರಾಯಚೂರು : ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಪೋಷಕತ್ವ ಮಾರ್ಗಸೂಚಿಯಂತೆ ಅರ್ಹ ಸಂಭವನೀಯ ಸಾಕು ಪೋಷಕರಿಂದ ಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
0-18 ವರ್ಷದೊಳಗಿನ ಮಕ್ಕಳ ಪೋಷಣೆ ಮತ್ತು ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದು, ಪೋಷಕತ್ವ ಎಂದರೆ ಮಕ್ಕಳ ಕಲ್ಯಾಣ ಸಮಿತಿಯು ಮಗುವಿನ ರಕ್ಷಣೆಯನ್ನು ಜೈವಿಕ ಕುಟುಂಬವನ್ನು ಹೊರತುಪಡಿಸಿ, ಮತ್ತೊಂದು ಕೌಟುಂಬಿಕ ವಾತಾವರಣ ಹೊಂದಿರುವ ಪರ್ಯಾಯ ವ್ಯವಸ್ಥೆಯಲ್ಲಿ ಇರಿಸುವುದನ್ನು ಪೋಷಕತ್ವ ಎನ್ನಬಹುದು. ಈ ಪರ್ಯಾಯ ವ್ಯವಸ್ಥೆಯ ಮಕ್ಕಳ ಕಲ್ಯಾಣ ಸಮಿತಿಯಿಂದ ಆಯ್ಕೆ ಮಾಡಿ, ಅರ್ಹತೆ ಹೊಂದಿರುವ, ಅಂಗೀಕಾರ ಪಡೆದಿರುವ ಹಾಗೂ ಮಕ್ಕಳ ರಕ್ಷಣೆಯನ್ನು ಮೇಲ್ವಿಚಾರಣೆಗೆ ಒಳಪಡುವ ವ್ಯವಸ್ಥೆಯಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್(44)ರನ್ವಯ ಪೋಷಕತ್ವ ಯೋಜನೆಯಲ್ಲಿ ಮಕ್ಕಳನ್ನು ಇರಿಸಲು ಗುರುತಿಸಲ್ಪಟ್ಟ ಕುಟುಂಬ,”ಮಕ್ಕಳು ಕುಟುಂಬದ ವಾತವರಣದಲ್ಲಿ ಬೆಳೆಯಲು” ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ರಾಯಚೂರು ಆದೇಶದ ಮೇರೆಗೆ ಕುಟುಂಬದಲ್ಲಿ ತಾತ್ಕಾಲಿಕವಾಗಿ ಅಥವಾ ವಿಸ್ತರಿಸಲ್ಪಟ್ಟ ಅವಧಿಗೆ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ನೀಡಬಹುದಾಗಿದೆ.
ರಾಯಚೂರು ಜಿಲ್ಲೆಯಲ್ಲಿ ಮಕ್ಕಳಿಲ್ಲದ ದಂಪತಿಗಳು, ಏಕ ಪೋಷಕ ಕುಟುಂಬಸ್ಥರು, ಮಕ್ಕಳಿಗೆ ಪೋಷಣೆ ಮತ್ತು ರಕ್ಷಣೆ ನೀಡಲು ಆಸಕ್ತಿ ಇರುವವರು ಈ ಕಛೇರಿಯ ವಿಳಾಸ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮನೆ ಸಂಖ್ಯೆ: 1-9-138, ಪಶ್ಚಿಮ ಪೊಲೀಸ್ ಠಾಣೆ ಹಿಂದೆ, ಮಾರಮ್ಮಗುಡಿ ಎದುರುಗಡೆ, ಗೋಲ್ ಮಾರ್ಕೆಟ್, ಆಜಾದ್ ನಗರ ರಾಯಚೂರು-584101. ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ-08532-226226, 8618362385, 9731603295, 8660627793ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಉದ್ಯೋಗ ಸೃಜನೆಯಲ್ಲಿ ರಾಯಚೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ, ಜಾಬ್ ಕಾರ್ಡ್ ಮೇಳಕ್ಕೆ ವಿಶೇಷ ಒತ್ತು
ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳನ್ನು ಕಲ್ಪಿಸಿ, ಅವರ ಜೀವನೋಪಾಯವನ್ನು ಸುಧಾರಿಸುವ ಹಾಗೂ ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಯುವ ಉದ್ದೇಶದಿಂದ ರಾಯಚೂರು ಜಿಲ್ಲಾ ಪಂಚಾಯತಿಯು ವಿವಿಧ ವಿನೂತನ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳ ಮೂಲಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ.
ವಿಕಸಿತ ಭಾರತ–ಜಿ ರಾಮ್ ಜಿ 125 ದಿನಗಳ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ 179 ಗ್ರಾಮ ಪಂಚಾಯಿತಿಗಳಲ್ಲಿ ಜುಲೈ 1ರಿಂದ ವಿಕಸಿತ ಗ್ರಾಮ ಪಂಚಾಯತಿಯಿAದ ವಿಕಸಿತ ಭಾರತದೆಡೆಗೆ ಎಂಬ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಕುಟುಂಬಗಳ ಜೀವನೋಪಾಯಕ್ಕೆ ಆಸರೆಯಾಗುವಂತೆ ಸ್ಥಳೀಯವಾಗಿ ಅಕುಶಲ ಉದ್ಯೋಗವನ್ನು ಒದಗಿಸುವುದು, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶಗಳಾಗಿವೆ.
ಉದ್ಯೋಗ ಖಾತ್ರಿಯೊಂದಿಗೆ ವಲಸೆ ತಡೆಗೆ ಆದ್ಯತೆ ವಿಬಿಜಿ–ರಾಮ್ ಜಿ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದರ ಜೊತೆಗೆ ಸಮಾನ ಕೂಲಿ, ಜಲಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಜೀವನೋಪಾಯದ ಅವಕಾಶಗಳ ವಿಸ್ತರಣೆಗೆ ಆದ್ಯತೆ ನೀಡಲಾಗುತ್ತಿದೆ.
ಅಭಿಯಾನದಡಿ 125 ದಿನಗಳ ಖಾತರಿಪಡಿಸಿದ ಉದ್ಯೋಗ, ಗಂಡು-ಹೆಣ್ಣಿಗೆ ಸಮಾನ ಅವಕಾಶ, ಸಮಾನ ಕೂಲಿ, ವಲಸೆಯ ಯೋಚನೆ ಯಾಕೆ? ವಿಬಿಜಿ–ರಾಮ್ ಜಿ ಯೋಜನೆಯಡಿ ಸ್ಥಳೀಯವಾಗಿಯೇ ಉದ್ಯೋಗ ಖಾತ್ರಿ!, ಕೆಲಸವೂ ಇಲ್ಲೇ, ಕೂಲಿಯೂ ಇಲ್ಲೇ; ಸಂತೋಷದಿAದ ನೆಲೆಸೋಣ ನಮ್ಮೂರಲ್ಲೇ!, ಗ್ರಾಮೀಣ ಆರ್ಥಿಕತೆಯ ಸಬಲೀಕರಣಕ್ಕೆ ಒತ್ತು ಎಂಬ ಸಂದೇಶದೊAದಿಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಜೀವನಮಟ್ಟ ಸುಧಾರಿಸುವ ಸಲುವಾಗಿ ಜಲಸಂರಕ್ಷಣೆ ಹಾಗೂ ಜಲಸಂಬಂಧಿತ ಕಾಮಗಾರಿಗಳಿಗೆ ಉತ್ತೇಜನ, ಗ್ರಾಮೀಣ ಜೀವನೋಪಾಯದ ಅವಕಾಶಗಳ ವಿಸ್ತರಣೆ, ಗ್ರಾಮೀಣ ಮೂಲಸೌಕರ್ಯಗಳ ಬಲವರ್ಧನೆ ಹಾಗೂ ಗ್ರಾಮೀಣ ಜನರ ಕೌಶಲ್ಯ ಮತ್ತು ಸಾಮರ್ಥ್ಯ ವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ.
ಯೋಜನೆಯಡಿ ಜಲಸಂರಕ್ಷಣೆ, ಅಂತರ್ಜಲ ಮರುಪೂರಣ, ಜಲಾನಯನ ಪ್ರದೇಶಗಳ ಅಭಿವೃದ್ಧಿ, ನೀರಾವರಿ ಸೌಲಭ್ಯಗಳ ವೃದ್ಧಿ, ಜಲಮೂಲಗಳ ಪುನಶ್ಚೇತನ ಹಾಗೂ ಅರಣ್ಯೀಕರಣದಂತಹ ಕಾಮಗಾರಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ.
2026–27ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಒಟ್ಟು 17,376 ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರಿಸಲಾಗಿದೆ. ಅವುಗಳಲ್ಲಿ ಜಲ ಭದ್ರತೆಗೆ ಸಂಬAಧಿಸಿದ ಕಾಮಗಾರಿಗಳು – 6,356, ಗ್ರಾಮೀಣ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಕಾಮಗಾರಿಗಳು – 5,011, ಗ್ರಾಮೀಣ ಜೀವನೋಪಾಯಕ್ಕೆ ಸಂಬAಧಿಸಿದ ಕಾಮಗಾರಿಗಳು – 6,004 ಹಾಗೂ ವಿಪತ್ತು ನಿರ್ವಹಣೆಗೆ ಸಂಬAಧಿಸಿದ ಕಾಮಗಾರಿಗಳು – 5 ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ.
ಮಾನವ ದಿನಗಳ ಸೃಜನೆಯಲ್ಲಿ ರಾಜ್ಯಕ್ಕೆ ಪ್ರಥಮ: 2026–27ನೇ ಸಾಲಿನಲ್ಲಿ ರಾಯಚೂರು ಜಿಲ್ಲೆಗೆ ವಿಬಿಜಿ–ರಾಮ್ ಜಿ ಯೋಜನೆಯಡಿ 1 ಕೋಟಿ 15 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ನಿಗದಿಪಡಿಸಲಾಗಿದ್ದು, ಜುಲೈ 1 ರಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 21,61,161 ಮಾನವ ದಿನಗಳನ್ನು ಸೃಜಿಸಲಾಗಿದೆ. ಈ ಮೂಲಕ ರಾಯಚೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಅರಕೇರಾ–1,13,525, ದೇವದುರ್ಗ–95,749, ಲಿಂಗಸೂಗೂರು–4,54,355, ಮಾನ್ವಿ–3,74,242, ಮಸ್ಕಿ–4,47,490, ರಾಯಚೂರು–1,80,485, ಸಿಂಧನೂರು–4,20,363, ಸಿರವಾರ–74,952 ತಾಲ್ಲೂಕುವಾರು ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ.
ವಿಬಿಜಿ–ರಾಮ್ ಜಿ ಯೋಜನೆಯಡಿ ಅರ್ಹ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶಗಳನ್ನು ತಲುಪಿಸುವ ಉದ್ದೇಶದಿಂದ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳವನ್ನು ಅಭಿಯಾನದ ರೂಪದಲ್ಲಿ ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ 8,636 ಹೊಸ ಜಾಬ್ ಕಾರ್ಡ್ಗಳನ್ನು ವಿತರಿಸಲಾಗಿದೆ.
ವಿಬಿಜಿ–ರಾಮ್ ಜಿ ಯೋಜನೆಯಡಿ ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು, ಗ್ರಾಮೀಣ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು, ಜಲಸಂಪನ್ಮೂಲಗಳನ್ನು ಸಂರಕ್ಷಿಸುವುದು ಹಾಗೂ ಗ್ರಾಮೀಣ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ನೆರವಾಗುವುದು ಜಿಲ್ಲಾ ಪಂಚಾಯತಿಯ ಪ್ರಮುಖ ಆದ್ಯತೆಯಾಗಿದೆ.

