ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಮುಂದುವರೆದಿವೆ. ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂವನ್ನು ಮೂಲಭೂತವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ತೀವ್ರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸಜೀವವಾಗಿ ದಹಿಸಲು ಯತ್ನಿಸಿದ್ದ ವ್ಯಕ್ತಿ ಕೊಂಕನ್ ಚಂದ್ರ (50) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳ ದಾಳಿಯಿಂದ ತಪ್ಪಿಸಿಕೊಂಡು ಪಾರಾಗಿದ್ದ ಕೊಂಕನ್ ಚಂದ್ರ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕೆಔರಾಗಾಂಗ್ ಪ್ರದೇಶದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಕೊಂಕನ್ ಚಂದ್ರ, ಮನೆಗೆ ತೆರಳುತ್ತಿದ್ದಾಗ ಅವರ ಮೇಲೆ ದಾಳಿ ನಡೆದಿದೆ. ಕೊಂಕನ್ ಮೇಲೆ ದುಷ್ಕರ್ಮಿಗಳು ಹಲವು ಬಾರಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದರಲ್ಲದೇ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಬೆಂಕಿ ಹೊತ್ತಿಕೊಂಡಿದ್ದ ವೇಳೆ ಅವರು ಪಕ್ಕದಲ್ಲಿದ್ದ ಕೆರೆಗೆ ಹಾರಿ ಜೀವ ಉಳಿಸಿಕೊಂಡಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ಥಳೀಯರು ರಕ್ಷಿಸಿ ಢಾಕಾ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಾಂಗ್ಲಾದಲ್ಲಿ ಕಳೆದ ಎರಡು ವಾರಗಳಲ್ಲಿ ಹಿಂದೂಗಳ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ. ನನ್ನ ಪತಿಯ ಸಾವಿಗೆ ನ್ಯಾಯ ಬೇಕು. ಅವರೊಬ್ಬ ಸರಳ ವ್ಯಕ್ತಿಯಾಗಿದ್ದರು ಎಂದು ಕೊಂಕನ್ ಪತ್ನು ಕಣ್ಣೀರಿಟ್ಟಿದ್ದಾರೆ.

