HomeKarnatakaBREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

BREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಾಂಗ್ಲಾದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್(25) ಎಂಬುವನನ್ನು ಬಂಧಿಸಲಾಗಿದೆ.

ರಾಜ್ಯ ಆಂತರಿಕ ಭದ್ರತಾ ವಿಭಾಗ, ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಅನರುಲ್ ಶೇಖ್ ನನ್ನು ಬಂಧಿಸಿದ್ದಾರೆ. ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ ನಲ್ಲಿ ಅನರುಲ್ ಶೇಖ್ ನೆಲೆಸಿದ್ದು, ಕಳೆದ ಮೂರು ವರ್ಷದಿಂದ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.

ಮೂರು ವರ್ಷದ ಹಿಂದೆ ಅಕ್ರಮವಾಗಿ ಭಾರತದ ಗಡಿ ಪ್ರವೇಶಿಸಿದ್ದ. ಭಾರತ -ಬಾಂಗ್ಲಾ ಅಂತರಾಷ್ಟ್ರೀಯ ಗಡಿ ರೇಖೆ ಲಾಲಗೋಲ ಮೂಲಕ ಪ್ರವೇಶಿಸಿ ಪಶ್ಚಿಮ ಬಂಗಾಳದ ಮೂಲಕ ಭಾರತಕ್ಕೆ ಬಂದು ಅಲ್ಲಿಂದ ಕರ್ನಾಟಕದ ಉಡುಪಿಗೆ ಬಂದು ನೆಲೆಸಿದ್ದ. ನಂತರ ಮಂಗಳೂರಿನ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular