ದುರ್ಗಾಪೂಜಾ ಮಂಟಪದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ದುರ್ಗಾಪೂಜಾ ಪಂಗಡದ ಮೇಲೆ ಕೆಲವು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದರಿಂದಾಗಿ ಆತಂಕ ನೂಕುನುಗ್ಗಲು ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ.

ಓಲ್ಡ್ ಢಾಕಾದ ತಾಟಿ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದುರ್ಗಾ ಪೂಜಾ ಮಂಟಪದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.

ಪೆಟ್ರೋಲ್ ಬಾಂಬ್ ಎಸೆದ ನಂತರ ದೊಡ್ಡ ಶಬ್ದ ಕೇಳಿಬಂದಿದ್ದು, ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ಸಂಬಂಧಿಸಿದ ವೀಡಿಯೊವನ್ನು “ವಾಯ್ಸ್ ಆಫ್ ಬಾಂಗ್ಲಾದೇಶ ಹಿಂದೂ” ಎಂಬ X ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದನ್ನು ಕಾಣಬಹುದಾಗಿದೆ. ಹಂಚಿಕೊಂಡ ಮಾಹಿತಿಯ ಪ್ರಕಾರ, ತಾಟಿ ಬಜಾರ್‌ನ ಪೂಜಾ ಮಂಟಪದಲ್ಲಿ ಸ್ಫೋಟ ಸಂಭವಿಸಿದೆ.

https://twitter.com/VHindus71/status/1844769472315343102

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read