ಗ್ರಾಹಕರಿಗೆ ಗುಡ್ ನ್ಯೂಸ್: ದೀರ್ಘಕಾಲದವರೆಗೆ ಪಡೆಯದೆ ಉಳಿದ ಬ್ಯಾಂಕ್ ಠೇವಣಿ, ವಿಮಾ ಕಂತು, ಷೇರು ವಾರಸುದಾರರಿಗೆ ಹಸ್ತಾಂತರ

ಕೆನರಾ ಬ್ಯಾಂಕ್‌ ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಸಲುವಾಗಿ ಅ. 24 ರಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಣ ಮತ್ತು ಕ್ಲೇಮ್ ಮಾಡದ ಠೇವಣಿಗಳನ್ನು ಕ್ಲೇಮ್ ಮಾಡಬಹುದು. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ.

ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಅಗತ್ಯ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read