ಬೆಂಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಬ್ಯಾಂಕ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿವೇಕ್ ಮೃತ ದುರ್ದೈವಿ. ಮೂರು ದಿನಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ವಿವೇಕ್ ಐಸಿಐಸಿಐ ಬ್ಯಾಂಕ್ ನಲ್ಲಿ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಮೃತನ ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಮೂರು ದಿನಗಳಿಂದ ಡಲ್ ಆಗಿದ್ದರು. ಮೂರು ದಿನದ ಹಿಂದೆ ನೇಣು ಬಿಗಿದುಕೊಂಡಿದ್ದರು. ಯಾವುದೇ ಡೆತ್ ನೋಟ್ ಕೂಡ ಬರೆದಿಟ್ಟಿಲ್ಲ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪತ್ನಿ ಕಣ್ಣೀರಿಟ್ಟಿದ್ದಾಳೆ.