HomeLatest NewsBIG NEWS: ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್ ನೌಕರರ ಮುಷ್ಕರ

BIG NEWS: ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಎದುರಿಗೆ ಒತ್ತಾಯಿಸಿ ಜನವರಿ 27ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಷೇರುಪೇಟೆ, ವಿದೇಶಿ ವಿನಿಮಯ ವ್ಯವಹಾರಗಳು ವಾರದಲ್ಲಿ ಐದು ದಿನ ನಡೆಯುತ್ತದೆ. ಹೀಗಾಗಿ ಬ್ಯಾಂಕ್ ಗಳಿಗೆ 5 ಕೆಲಸದ ದಿನಗಳು ಇರಬೇಕು ಎನ್ನುವ ಬೇಡಿಕೆ ಮೊದಲಿನಿಂದಲೂ ಇದೆ. ಐದು ದಿನದ ಕೆಲಸ ದಿನಗಳನ್ನು ಜಾರಿಗೆ ತರುವುದಾಗಿ ಕೇಂದ್ರ ಸರ್ಕಾರ 2015ರಲ್ಲಿ ಭರವಸೆ ನೀಡಿದ್ದು, ಮೊದಲ ಹಂತದಲ್ಲಿ ಪ್ರತಿ ತಿಂಗಳ 2ನೇ, 4ನೇ ಶನಿವಾರ ರಜೆ ಎಂದು ಘೋಷಿಸಲಾಗಿತ್ತು. ಉಳಿದ ಶನಿವಾರಗಳಂದು ಬ್ಯಾಂಕ್ ಗಳು ಕಾರ್ಯನಿರ್ವಹಿಸಬೇಕಿದೆ. ಹೀಗಾಗಿ ವಾರಕ್ಕೆ ಐದು ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗಿದೆ.

ಮುಷ್ಕರದ ಪರಿಣಾಮ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ಸೇರಿದಂತೆ ಬ್ಯಾಂಕಿಂಗ್ ಸೇವೆಗಳು ಅಡಚಣೆಗೆ ಒಳಗಾಗಲಿವೆ.

ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಉಂಟಾಗಬಹುದು.

ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಮಾಧ್ಯಮಗಳ ಮೂಲಕ ಲಭ್ಯವಿರುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular