ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತುಂಗಾ ನದಿಯಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಯೂನಿಯನ್ ಬ್ಯಾಂಕ್ ಶಾಖೆ ಮ್ಯಾನೇಜರ್ ಎನ್. ಶ್ರೀವಾಸ್ತವ(38) ಅವರ ಶವ ಬುಧವಾರ ತುಂಗಾ ನದಿಯಲ್ಲಿ ಪತ್ತೆಯಾಗಿದೆ.

ಸೋಮವಾರ ತುಂಗಾ ನದಿಯ ರಾಮಕೊಂಡ ಸಮೀಪ ನದಿ ದಡದಲ್ಲಿ ಚಪ್ಪಲಿ ಬಿಟ್ಟು ಶ್ರೀವಾಸ್ತವ ನಾಪತ್ತೆಯಾಗಿದ್ದರು. ಅವರು ನದಿಗೆ ಸ್ನಾನಕ್ಕೆ ಇಳಿದಾಗ ಅವಘಡ ಸಂಭವಿಸಿರಬಹುದು ಎಂಬ ಶಂಕೆಯಲ್ಲಿ ಮಂಗಳವಾರ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

ಬುಧವಾರ ಮೃತ ದೇಹ ಪತ್ತೆಯಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಶ್ರೀವಾಸ್ತವ ಅವಿವಾಹಿತರಾಗಿದ್ದು, ಎರಡು ತಿಂಗಳ ಹಿಂದೆ ಅರಳಸುರಳಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಆಗಿ ವರ್ಗಾವಣೆಯಾಗಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read