
ಚಾಮರಾಜನಗರ: ಹಾಡಹಗಲೇ ಕೆನರಾ ಬ್ಯಾಂಕ್ ಗೆ ನುಗ್ಗೆ 5 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸಿಬ್ಬಂದಿ ರೀತಿ ಬ್ಯಾಂಕಿನ ಕ್ಯಾಶ್ ಕೌಂಟರ್ ಪ್ರವೇಶಿಸಿದ ದುಷ್ಕರ್ಮಿ ಕ್ಯಾಶ್ ಕೌಂಟರ್ ನಲ್ಲಿದ್ದ 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ರೀತಿ ವರ್ತಿಸಿದ್ದರಿಂದ ಯಾರಿಗೂ ಅನುಮಾನ ಬಂದಿಲ್ಲ. ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಚಾಲಾಕಿ ಕಳ್ಳರ ಕರಾಮತ್ತು ಬಯಲಾಗಿದೆ. ಹೊರಗೆ ನಿಂತು ಮೂವರು ಸಹಚರರು ಸನ್ನೆ ಮಾಡುತ್ತಾ ಆತನಿಗೆ ಸಾಥ್ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಚಾಮರಾಜನಗರ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
