HomeKarnatakaSHOCKING: ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ 5 ಲಕ್ಷ ರೂ. ದೋಚಿ ಪರಾರಿ

SHOCKING: ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ 5 ಲಕ್ಷ ರೂ. ದೋಚಿ ಪರಾರಿ

ಚಾಮರಾಜನಗರ: ಹಾಡಹಗಲೇ ಕೆನರಾ ಬ್ಯಾಂಕ್ ಗೆ ನುಗ್ಗೆ 5 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸಿಬ್ಬಂದಿ ರೀತಿ ಬ್ಯಾಂಕಿನ ಕ್ಯಾಶ್ ಕೌಂಟರ್ ಪ್ರವೇಶಿಸಿದ ದುಷ್ಕರ್ಮಿ ಕ್ಯಾಶ್ ಕೌಂಟರ್ ನಲ್ಲಿದ್ದ 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ರೀತಿ ವರ್ತಿಸಿದ್ದರಿಂದ ಯಾರಿಗೂ ಅನುಮಾನ ಬಂದಿಲ್ಲ. ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಚಾಲಾಕಿ ಕಳ್ಳರ ಕರಾಮತ್ತು ಬಯಲಾಗಿದೆ. ಹೊರಗೆ ನಿಂತು ಮೂವರು ಸಹಚರರು ಸನ್ನೆ ಮಾಡುತ್ತಾ ಆತನಿಗೆ ಸಾಥ್ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಚಾಮರಾಜನಗರ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular